ಬೆಂಗಳೂರಿನ ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಸುಕುಮಾರ್ ಶೆಟ್ಟಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷರು ಹಾಗೂ ಜಲಸಂಪನ್ಮೂಲ ಸಚಿವರಾದ DCM ಡಿ.ಕೆ.ಶಿವಕುಮಾರ್, ಗೃಹಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಸಲೀಂ ಅಹ್ಮದ್, ಸಚಿವರಾದ ಕೆ.ಜೆ.ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಎಂಎಲ್ಸಿ ಯು.ಬಿ.ವೆಂಕಟೇಶ್, ಶಾಸಕ ಎಚ್.ಡಿ.ತಮ್ಮಯ್ಯ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಪಿ.ಟಿ.ಪರಮೇಶ್ವರ್ ನಾಯ್ಕ್, ರಾಜಶೇಖರ್ ಪಾಟೀಲ್, ಆಯನೂರು ಮಂಜುನಾಥ್ ಅವರು ಸೇರಿದಂತೆ ಮತ್ತಿತರರಿದ್ದರು.