ಆರೋಗ್ಯ ಇಲಾಖೆ ರಾಜ್ಯಾದ್ಯಂತ ಭಾನುವಾರ ಪಲ್ಸ್ ಪೋಲಿಯೋ ಹನಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು 5 ವರ್ಷದೊಳಗಿನ 62.85 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ದೇಶವು ಪೋಲಿಯೋ ಮುಕ್ತ ರಾಷ್ಟ್ರವಾಗಿದೆ ಇದು ಮಹತ್ತರವಾದ ಸಾಧನೆ ಆದರೂ ಈ ಸಮಸ್ಯೆ ಜಗತ್ತಿನ ವಿವಿಧಡೆ ಮಕ್ಕಳನ್ನು ಬಾಧಿಸುತ್ತಿದೆ ಇದು ಭಾರತದ ಆತಂಕಕ್ಕೆ ಕಾರಣವಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಹನಿ ಹಾಕಲಾಗುತ್ತಿದೆ 33.712 ಬೂತ್ ಗಳಲ್ಲಿ ಗುರುತಿಸಲಾಗಿದೆ .963 ಸಂಚಾರಿ ತಂಡವು ರೈಲು ನಿಲ್ದಾಣ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ 1. 11 ಲಕ್ಷ ಕಾರ್ಯ ಕರ್ತರು ಬಳಸಿಕೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ .ಐದು ವರ್ಷದೊಳಗಿನ ಎಲ್ಲಾ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಲಸಿಗೆ ಸಂಪೂರ್ಣ ಸುರಕ್ಷಿತವಾಗಿದ್ದು ವದಂತಿಗಳಿಗೆ ಕಿವಿ ಕೊಡಬಾರದು.ಪೋಲಿಯೋ ವಿರುದ್ಧ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು, ರಾಜ್ಯದ ಎಲ್ಲಾ ಆಸ್ಪತ್ರೆಗಳು, ರೈಲು ನಿಲ್ದಾಣ , ಮೈ ಟ್ರೋ ನಿಲ್ದಾಣ, ವಿಮಾನ ನಿಲ್ದಾಣ ,ಗ್ರಾಮೀಣ ಪ್ರದೇಶ ,ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ.
ಅದರ ಪ್ರಯುಕ್ತ
ಜಿಲ್ಲಾಡಳಿತ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್.ಸಿ.ಹೆಚ್ ವಿಭಾಗ ಕಲಬುರ್ಗಿ ವತಿಯಿಂದ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ್ ಆವರಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾಧಿಕಾರಿಗಳಾದ ಫೌಜೀಯಾ ತರನ್ನುಂ ಪಲ್ಸ್ ಪೋಲಿಯೋ ಲಸಿಕೆಯ ಮಹತ್ವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಭಂವರ ಸಿಂಗ್ ಮೀನಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಕಲ್ಬುರ್ಗಿ, ಭುವನೇಶ್ ಪಾಟೀಲ್ ಆಯುಕ್ತರು ಮಹಾನಗರ ಪಾಲಿಕೆ ಕಲಬುರ್ಗಿ, ಸೇರಿದಂತೆ ಗ್ರಾಮದ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.