ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗಿತ್ತು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಧ್ವಜಾರೋಹಣ ನೆರವೇರಿಸಿ, ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರುನಾಡು ಕಲೆ, ಸಂಗೀತ, ಸಾಂಸ್ಕೃತಿಕ ವೈಭವದ ನಾಡು. ಪ್ರಸ್ತುತ ಪ್ರತಿಯೊಂದು ರಾಷ್ಟçಗಳಲ್ಲೂ ೧೦ ರಿಂದ ೧೫ ಕನ್ನಡ ಸಂಘಗಳು ಇದ್ದೇ ಇರುತ್ತವೆ. ಕನ್ನಡೇತರ ಮೂಲದಿಂದ ಬಂದು ಕನ್ನಡವನ್ನೇ ಉಸಿರಾಗಿಸಿಕೊಂಡು ಕನ್ನಡದಲ್ಲಿ ಅಪಾರ ಸಾಧನೆ ಮಾಡಿದ ಸಾಧಕರು ಹಲವರಿದ್ದಾರೆ. ಆದ್ದರಿಂದ ಕನ್ನಡ ಮೂಲದವರಲ್ಲದವರೂ ಸಹ ಕನ್ನಡ ಕಲಿಯಬೇಕು ಎಂದು ಸಲಹೆ ನೀಡಿದರು.
ರಾಜ್ಯೋತ್ಸವ ಕಾರ್ಯಕ್ರಮದ ಭಾಗವಾಗಿ ಕನ್ನಡ ಗೀತೆಗಳ ಗಾಯನ, ಸಮೂಹ ನೃತ್ಯ , ಜಾನಪದ ನೃತ್ಯ , ದೇಶಿ ಕಲೆಗಳ ಅನಾವರಣ , ಗ್ರಾಮೀಣ ಆಟೋಟಗಳು ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಸದಸ್ಯರಾದ ಕನ್ನಿಕಾ ಪರಮೇಶ್ವರಿ, ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಕೆ ಬಿ ಲಿಂಗೇಗೌಡ, ಸಾಹೇ ವಿವಿ ಕುಲಸಚಿವರಾದ ಡಾ.ಎಂ.ಝಡ್.ಕುರಿಯನ್, ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳ ಸಲಹೆಗಾರರಾದ ಶ್ರೀ ವಿವೇಕ್ ವೀರಯ್ಯ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಂ.ಎಸ್.ರವಿಪ್ರಕಾಶ, ಶ್ರೀ ಸಿದ್ಧಾರ್ಥ ಹಾರ್ಟ್ ಸೆಂಟರ್ನ ಕಾರ್ಡಿಯಾಕ್ ಫ್ರಂಟಿಡಾ ಮುಖ್ಯಸ್ಥ ಡಾ. ತಮೀಮ್ ಅಹಮದ್, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ. ರೇಣುಕಾಲತಾ.ಎಸ್ ಸೇರಿದಂತೆ ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ , ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮನ: ಕಾರ್ಯಕ್ರಮದ ಆರಂಭದಲ್ಲಿ ದೇಶಸೇವೆಗಾಗಿ ಪ್ರಾಣ ಅರ್ಪಿಸಿದ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಕಮಾಂಡರ್ ಮಲ್ಲಿಕಾರ್ಜುನ ಮೇಟಿ ಮತ್ತು ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.