ಸೆ.೩ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
ತುಮಕೂರು(ಕ.ವಾ)ಆ.೩೧: ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಒಟ್ಟು ೨೦ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ ೩ರಂದು ಬೆಳಿಗ್ಗೆ ೯-೩೦ ರಿಂದ ಮ.೧೨ ಗಂಟೆಯವರೆಗೆ ಹಾಗೂ ಮಧ್ಯಾಹ್ನ ೨ ರಿಂದ ಸಂಜೆ ೪.೩೦ ಗಂಟೆಯವರೆಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಿನ ಅವಧಿಯಲ್ಲಿ ಒಟ್ಟು ೪೧೦೭ ಅಭ್ಯರ್ಥಿಗಳು ಮತ್ತು ಮಧ್ಯಾಹ್ನದ ಅವಧಿಯಲ್ಲಿ ಒಟ್ಟು ೫೧೨೮ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆ ಬರೆಯುವ ಎಲ್ಲಾ ಅಭ್ಯರ್ಥಿಗಳು ನಿಗಧಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಸೆ.೩ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
Leave a comment
Leave a comment