ತುಮಕೂರು:ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿ,ಅತಿ ಹೆಚ್ಚು ಮತಗಳ ಅಂತರದಿAದ ಗೆಲುವು ಕಂಡಿರುವ ಕೆ.ಎನ್.ರಾಜಣ್ಣ ಅವರನ್ನು ಉಪಮುಖ್ಯಮಂತ್ರಿ ಮಾಡಿ, ಮಹತ್ವದ ಖಾತೆ ನೀಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ನ್ನು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಾಲ್ಮೀಕಿ ಸ್ವಾಭಿಮಾನಿ ಸಂಘ(ರಿ)ನ ರಾಜ್ಯಾಧ್ಯಕ್ಷ ಚಳವಳಿ ರಾಜಣ್ಣ, ಕರ್ನಾಟಕ ರಾಜ್ಯ ವಾಲ್ಮೀಕಿ ಕ್ರಾಂತಿ ಸೇನೆಯ ರಾಜ್ಯಾಧ್ಯಕ್ಷ ಕುಪ್ಪೂರು ಶ್ರೀಧರನಾಯಕ್,ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ,ಬಿಜೆಪಿಯ ಮಧುಕುಮಾರ್,ಕೆಂಪಹೊನ್ನಯ್ಯ,ವಾಲ್ಮೀಕಿ ಸಮುದಾಯದ ಮುಖಂಡರಾದ ಸರಸ್ವತಿ, ರಂಗಸ್ವಾಮಯ್ಯ, ಲಕ್ಷಿö್ಮನಾರಾಯಣ ಅವರುಗಳು,ವಾಲ್ಮೀಕಿ ಸಮುದಾಯಕ್ಕೆ ಸೇರಿದ ಕೆ.ಎನ್.ರಾಜಣ್ಣ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಹಾಗಾಗಿ ಅವರನ್ನು ಉಪಮುಖ್ಯಮಂತ್ರಿ ಮಾಡಿ, ಮಹತ್ವದ ಖಾತೆ ನೀಡಬೇಕೆಂಬುದು ನಮ್ಮಗಳ ಆಗ್ರಹವಾಗಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯ ಸುಮಾರು ೩ ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ.ಪ್ರತಿ ಚುನಾವಣೆಯಲ್ಲಿಯೂ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ.ಈ ಬಾರಿಯೂ ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಲ್ಲಿ ೭ ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಪ್ರಮುಖ ಪಾತ್ರವನ್ನು ವಾಲ್ಮೀಕಿ ಸಮುದಾಯದ ಮತದಾರರು ಹೊಂದಿದ್ದಾರೆ. ಹಾಗಾಗಿ ವಾಲ್ಮೀಕಿ ಸಮುದಾಯದಿಂದ ಆಯ್ಕೆಯಾಗಿರುವ ಕೆ.ಎನ್.ಆರ್.ಅವರಿಗೆ ಉಪಮುಖ್ಯಮಂತ್ರಿಯ ಜೊತೆಗೆ, ಮಹತ್ವದ ಖಾತೆ ನೀಡಬೇಕೆಂಬುದು ನಾಯಕ ಸಮುದಾಯದ ಎಲ್ಲಾ ನಾಯಕರ ಪಕ್ಷಾತೀತ ಒತ್ತಾಯವಾಗಿದೆ ಎಂದರು.
ಕೆ.ಎನ್.ರಾಜಣ್ಣ ಅವರನ್ನು ಉಪಮುಖ್ಯಮಂತ್ರಿ ಮಾಡಿ, ವಾಲ್ಮೀಕಿ ಸಮುದಾಯ
Leave a comment
Leave a comment