ತುಮಕೂರು: ಶೈಕ್ಷಣಿಕ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ತುಮಕೂರು ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟಕ್ಕೆ ಹೆಸರುವಾಸಿಯಾದ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯಲ್ಲಿ ಎಲ್ಲಾ ವರ್ಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಪ್ರದೀಪ್ ಅವರನ್ನು ಜಿಲ್ಲಾಡಳಿತ ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಶಾಖೆ ವತಿಯಿಂದ ಸೋಮವಾರ ಅವರ ಕಛೇರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪ್ರದೀಪ್ ಅವರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಸಂಪಾದಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್ ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಜಿ.ಕರುಣಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎನ್ ಮಂಜುನಾಥ್ಗೌಡ, ಜಿಲ್ಲಾ ಉಪಾಧ್ಯಕ್ಷ ಪಿ.ಎಸ್. ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ಖಜಾಂಚಿ ಕಂಬಣ್ಣ, ರಾಜ್ಯ ಜಂಟಿ ಕಾರ್ಯದರ್ಶಿ ರಂಗನಾಥ್ ಸೇರಿದಂತೆ ಹಲವು ಸಂಪಾದಕರು ಉಪಸ್ಥಿತರಿದ್ದರು.