ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಮಹಿಳಾ ವಕೀಲೆ ಮೇಲೆ ಪೊಲೀಸರಿಂದ ದೌರ್ಜನ್ಯವೆಸಗಿದ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಕೂಡಲೇ ಪೊಲೀಸರನ್ನು ವಜಾ ಗೊಳಿಸಬೆಕೆಂದು ಈ ಸಂದರ್ಭದಲ್ಲಿ ಸರಕಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ನ್ಯಾಯ ವಾದಿಗಳ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.