ತುಮಕೂರು – ಇಂದಿನ ಯುವ ಪೀಳಿಗೆ ಹಲವು ದುಷ್ಟಟಗಳಿಗೆ ಮಾರುಹೋಗಿ ಇಂದಿನ ದಿನ ಮಾನಸದಲ್ಲಿ ತಮ್ಮ ಅಮೂಲ್ಯವಾದ ವಿದ್ಯಾರ್ಥಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದು ಅಂತಹ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅಗತ್ಯವಿದ್ದು ಕಾನೂನಿನ ಅರಿವು ಇದ್ದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವುದಿಲ್ಲ ಹಾಗಾಗಿ ಇಂದಿನ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ ಎಂದು ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಸಬ್ ಇನ್ಸೆ÷್ಪಕ್ಟರ್ ಮೂರ್ತಿ ತಿಳಿಸಿದ್ದಾರೆ.
ತುಮಕೂರಿನ ಶೇಷಾದ್ರಿಪುರಂ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪೋಲಿಸ್ ಇಲಾಖೆ ಸಾರ್ವಜನಿಕರಿಗಾಗಿ ಹಲವು ಕಾರ್ಯಕ್ರಮಗಳನ್ನ ರೂಪಿಸುತ್ತಿದ್ದು ಅವುಗಳನ್ನ ಇಂದಿನ ಯುವ ಪೀಳಿಗೆ ಹಾಗೂ ಸಾರ್ವಜನಿಕರು ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ ಸಮಾಜದಲ್ಲಿನ ತಪುö್ಪಗಳನ್ನ ತಿದ್ದಲು ಸಾಧ್ಯ ಹಾಗಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಮಾತನಾಡಿದ ಅವರು
ಇಂದಿನ ವಿದ್ಯಾರ್ಥಿಗಳು ತಮ್ಮ ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳುವ ಸಮಯದಲ್ಲಿ ಮಾದಕ ವಸ್ತುಗಳ ಮೊರೆ ಹೋಗಿ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಮೂಲಕ ಸಮಾಜದ ಸ್ವಾಸ್ಥ÷್ಯ ಹಾಳಾಗುತ್ತಿದ್ದು ಇದರಿಂದ ಪೋಷಕರು ಹಾಗೂ ಆರಕ್ಷಕ ಇಲಾಖೆಗೂ ಸಹ ದೊಡ್ಡ ಸಮಸ್ಯೆ ತಂದೊಡ್ಡಿದ್ದು ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಇಂದಿನ ಯುವ ಪೀಳಿಗೆ ಜಾಗೃತರಾಗಿರಬೇಕು ಇಂತಹ ದುಷ್ಕöÈತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ ಅಂತಹ ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸ್ ಇಲಾಖೆ ಸದಾ ಸಿದ್ದ ಎಂದರು.
ಇನ್ನು ತುಮಕೂರು ಜಿಲ್ಲೆಯನ್ನು ಪೊಲೀಸ್ ಇಲಾಖೆ ಡ್ರಗ್ಸ್ ಮುಕ್ತ ಜಿಲ್ಲೆಮಾಡಲು ಪಣ ತೊಟ್ಟಿದ್ದು ಅದರಂತೆ ಡ್ರಗ್ಸ್ ತಡೆಯಲು ಯುವ ಸಮೂಹ ಸಹಕಾರಿ ಆಗಬೇಕು ಎಂದ ಅವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ರಸ್ತೆ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸಬೇಕು , ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ