ಕಲಬುರಗಿ: ಇಲ್ಲಿನ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ(ಅಭಿವೃದ್ಧಿ) ಆರ್.ಪಿ.ಜಾಧವ ಅವರ ಮನೆ, ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ಮಾಡಿದ್ದಾರೆ.ಆರ್.ಪಿ. ಜಾಧವ ಅವರು ಕಳೆದ ಕೆಲವು ವರ್ಷಗಳಿಂದ ಪಾಲಿಕೆಯಲ್ಲಿ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಕೆ. ಉಮೇಶ ನೇತೃತ್ವದಲ್ಲಿ ಮೂರು ತಂಡಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಎನ್ಜಿಒ ಕಾಲೊನಿಯ ಮನೆ, ಫರಹತಾಬಾದ್ ಸಮೀಪದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡಿ ದಾಳಿಯ ವೇಳೆ ಮನೆಯಲ್ಲಿ 25. ತೊಲೆ ಬಂಗಾರ, ಬೆಳ್ಳಿ, ಕಾರು, ಬೈಕ್ಗಳು ಪತ್ತೆಯಾಗಿವೆ,ಪಾಲಿಕೆಯ ಕಚೇರಿ ಮೇಲೂ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.