ಕಲಬುರಗಿ : ಕಲಬುರಗಿ ಜಿಲ್ಲಾ ಮಟ್ಟದಲ್ಲಿ ಉತ್ತಮ, ಆದರ್ಶ, ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ ರಾಜಶೇಖರ ತಲಾರಿಯವರಿಗೆ ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ, ಸಾಲಿನಲ್ಲಿ ತಿಪ್ಪಣ್ಣ ಕಂಠಪ್ಪ ಹೆರೂರ್ ಪ್ರೌಢಶಾಲೆ ದೇವಲ ಗಾಣಗಾಪೂರದ ಮುಖ್ಯ ಗುರುಗಳಾದ ರಾಜಶೇಖರ್ ತಲಾರಿ ಅವರು ಶಿಕ್ಷಣ ಕ್ಷೇತ್ರದಲ್ಲಿ 15 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಉತ್ತಮವಾದ ಅವರ ಸೇವೆ ಗುರುತಿಸಿ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದನ್ನು ಗುರುತಿಸಿದ ಕಲಬುರಗಿಯ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ 2023- 24ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ,ಆದರ್ಶ ,ಶ್ರೇಷ್ಠ, ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿಗೆ ಬಾಜನರಾದ ಕೋಲಿ ಸಮಾಜ ಶಿಕ್ಷಕರಿಗೆ ಅಖಿಲ್ ಕರ್ನಾಟಕ ಸ್ನೇಹ ಗಂಗವಾಹಿನಿ ಸಂಸ್ಥೆಯು ದಿನಾಂಕ 5.10.2024 ರಂದು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಗುರುಗಳಾದ ರಾಜಶೇಖರ್ ತಲಾರಿ ಅವರಿಗೆ ಸನ್ಮಾನಿಸಿ ಗೌರವಿಸಿದೆ,