ತುಮಕೂರಿನ ಸಿದ್ದಗಂಗಾ ಮಠಕ್ಕೆ ಇಂದು ಬೆಳಿಗ್ಗೆ ಜೆಡಿಯು ರಾಜ್ಯಾಧ್ಯಕ್ಷರಾದ ಮಹಿಮ ಪಟೇಲ್ ಅವರು ಶಿವಗಂಗೆಯಲ್ಲಿ ನಡೆಯುತ್ತಿರುವ ಜೆಡಿಯು ನವಚೇತನ ಕಾರ್ಯಾಗಾರಕ್ಕೆ ತೆರಳುವ ಮುನ್ನ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಜಿ.ಎಲ್. ರವಿ, ಜಿಲ್ಲಾಧ್ಯಕ್ಷ ಕೆ.ಎಸ್. ರೇಣುಕಪ್ರಸಾದ್ ಮತ್ತಿತರರು ಭಾಗವಹಿಸಿದ್ದರು