ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತುಮಕೂರಿನಲ್ಲಿ ವಿಜಯೋತ್ಸವ, ಬಿಜೆಪಿಯ ದುರಾಡಳಿತಕ್ಕೆ ಸಂದ ಜಯ ಎಂದ ಅತಿಕ್ ಅಹಮ್ಮದ್
ತುಮಕೂರು:- ರಾಜ್ಯದಲ್ಲಿ ಕೋಮುವಾದಿ ಪಕ್ಷ ಬಿಜೆಪಿ ಸರ್ಕಾರ ಬೆಲೆ ಏರಿಕೆ ಸೇರಿದಂತೆ ರಾಜ್ಯದಲ್ಲಿ ನಡೆಸುತ್ತಿದ್ದ ದುರಾಡಳಿತಕ್ಕೆ ಬೇಸತ್ತು ಜನರು ಈ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವುದರ ಮೂಲಕ ಹೊಸ ಇತಿಹಾಸವನ್ನು ಬರೆದು ಜಿಲ್ಲೆಯಲ್ಲಿ ಒಟ್ಟು ಏಳು ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವ ಮೂಲಕ ಜನರು ಬಿಜೆಪಿಯ ದುರ್ಗಾದಲ್ಲಿದ್ದಕ್ಕೆ ಬೇಸತ್ತು ತಕ್ಕ ಪಾಠ ಕಲಿಸಿದ್ದಾರೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತಿಕ ಅಹಮದ್ ಅವರು ತಿಳಿಸಿದರು.
ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿ ಬೈಕ್ ರ್ಯಾಲಿ ನಡೆಸಿ ವಿಜಯೋತ್ಸವದ ನೇತೃತ್ವ ವಹಿಸಿಕೊಂಡು ನಂತರ ಮಾತನಾಡಿದ ಅತಿಕ್ ಅಹಮ್ಮದ್ಅವರು ರಾಜು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆದ ಪ್ರಣಾಳಿಕೆಯಲ್ಲಿ ಜನರ ಕಲ್ಯಾಣಕ್ಕಾಗಿ ರೂಪಿಸಿದ ಐದು ಗ್ಯಾರಂಟಿಗಳು ಜನರಿಗೆ ಇಷ್ಟವಾಗಿ ಬದಲಾವಣೆ ಬಯಸಿ ದುರಾಡಳಿತಕ್ಕೆ ಬೇಸತ್ತು ಜಿಲ್ಲೆಯಲ್ಲಿ೭ಸ್ಥಾನ ಗೆಲ್ಲಿಸುವ ಮೂಲಕ ಬಿಜೆಪಿ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಬಿಜೆಪಿಯ ದುರಾಡಳಿತದ ಹೊಸ ಕಾಯ್ದೆಗಳಿಂದ ಬೇಸತ್ತು ಹೊಸ ಬದಲಾವಣೆಗೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷ ಕ್ಕೆ ಬಹುಮತ ನಿಡಿದ್ದಾರೆ ಸದ್ಯಕ್ಕೆ ಕಾಂಗ್ರೆಸ್ ಹೈಕಾಮಾಂಡ್ ಸೂಕ್ತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿ ರಾಜ್ಯದ ಜನರ ಕಲ್ಯಾಣ ಕ್ಕೆ ಗ್ಯಾರಂಟಿ ಯೋಜನೆಗಳನ್ನು ಯತ್ತವತ್ತಾಗಿ ತರಲು ಯೋಜನೆವರೂಪಿಸಲಿದೆ ಎಂದರು