ಇಂದು ಉನ್ನತ ಹುದ್ದೆಯಲ್ಲಿರುವ ಅನೇಕರು ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ಬಂದವರೇ ಆಗಿದ್ದು, ನೀವೂ ಸಹ ಗುರಿಯನ್ನಿಟ್ಟುಕೊಂಡು ವಿದ್ಯಾಭ್ಯಾಸ ಮಾಡಿದರೆ ನಿಮ್ಮ ಕನಸು ನನಸಾಗುವುದರಲ್ಲಿ ಎರಡು ಮಾತಿಲ್ಲ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.
ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ “ಕೌಶಲ್ಯ ಅಭಿಯಾನ” ಹಾಗೂ ಯುವ ಸಬಲೀಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸೂಕ್ತ ಕೌಶಲ್ಯಾಭಿವೃದ್ಧಿಗೆ ಸಂಬAಧಿಸಿದ ತರಬೇತಿಯನ್ನು ನೀಡುವ ಮೂಲಕ ಸಶಕ್ತರನ್ನಾಗಿ ಮಾಡುವ ಅಗತ್ಯವಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದAತೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ಮತ್ತು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆಯನ್ನು ಜನವರಿಯೊಳಗೆ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಜ್ಯದ ಬಜೆಟ್ನಲ್ಲಿ ಹಾಸ್ಟೆಲ್ ಮತ್ತು ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದಾಗಿ ಘೋಷಣೆ ಮಾಡಿದ್ದು, ಅದರಂತೆ ಹಂತಹAತವಾಗಿ ಅಭಿವೃದ್ಧಿ ಕಾಣಲಿವೆ ಎಂದರು.
ಕಲಾ ವಿಜ್ಞಾನ, ವಾಣಿಜ್ಯ ವಿದ್ಯಾರ್ಥಿಗಳು, ತಮ್ಮ ತಮ್ಮ ಕೋರ್ಸ್ಗಳಲ್ಲಿ ಮುಂದುವರೆಯಿರಿ, ಬ್ಯಾಂಕಿAಗ್ ವಲಯದಲ್ಲಿ ಕಾಮರ್ಸ್ ಓದಿರುವಂತಹ ಅಭ್ಯರ್ಥಿಗಳದ್ದೇ ಮೇಲುಗೈ ಆಗಿದ್ದು, ಕನ್ನಡದಲ್ಲಿ ಬ್ಯಾಂಕಿAಗ್ ಪರೀಕ್ಷೆ ಎದುರಿಸುವಂತೆ ಸಲಹೆ ನೀಡಿದರು.
ಕೌಶಲ್ಯ ಇಲಾಖೆ, ತರಬೇತಿ ಮತ್ತು ಉದ್ಯೋಗ ಇಲಾಖೆ, ಮೈಕ್ರೋಸಾಪ್ಟ್ ಕಂಪನಿಯವರು, ಎಚ್ಸಿಎಲ್ ಕಂಪನಿಯವರು, ಇನ್ಕ್ಯಾಪ್, ವಸಂತನರಸಾಪುರ, ಹಿರೇಹಳ್ಳಿ ಅಂತರಸನಹಳ್ಳಿಯ ಕಂಪನಿಗಳ ಪ್ರತಿನಿಧಿಗಳು ಇಲ್ಲಿಗೆ ಬಂದಿದ್ದು, ನಿಮಗೆ ಕೌಶಲ್ಯ ತರಬೇತಿಯ ಬಗ್ಗೆ ಉದ್ಯೋಗ ಮೇಳ ಆಯೋಜಿಸಲು ದಿನಾಂಕ ನಿಗಧಿಪಡಿಸಲು ಇಲ್ಲಿಗೆ ಆಗಮಿಸಿದ್ದು, ಈ ಬಗ್ಗೆ ಅವರು ವಿವರಿಸಲಿದ್ದಾರೆ ಎಂದರು.
ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮಾತನಾಡಿ ವಿಶ್ವದಲ್ಲೇ ಜನಸಂಖ್ಯೆಯಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದ್ದು, ಅತ್ಯಂತ ಹೆಚ್ಚು ಯುವಜನತೆಯನ್ನು ಹೊಂದಿದ ರಾಷ್ಟçವೂ ಆಗಿದೆ. ಶೇ.೨೪ ರಷ್ಟು ಯುವಜನತೆಯನ್ನು ಹೊಂದಿದ ರಾಷ್ಟçವಾಗಿ ಹೊರಹೊಮ್ಮಿದೆ. ಹೀಗಿರುವಾಗ ದೇಶದ ಅಭಿವೃದ್ಧಿಗಾಗಿ ನಾವು ಯಾವ ರೀತಿ ಕೆಲಸ ಮಾಡಬಹುದು ಎಂಬ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದರು.