ತುಮಕೂರು, ಅಗಸ್ಟ್ ೪, ಕರ್ನಾಟಕ ವಾರ್ತೆ: ಕೇಂದ್ರ ಸರ್ಕಾರದಿಂದ ಜನ ಕಲ್ಯಾಣಕ್ಕಾಗಿ ಹಲವು ಯೋಜನೆಗಳ ಜಾರಿಗೊಳಿಸಿ, ಅನುದಾನ ಬಿಡುಗಡೆ ಮಾಡಲಾಗಿದೆ, ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷರಾದ ಎ.ನಾರಾಯಣಸ್ವಾಮಿ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಜನರ ಸಮಸ್ಯೆಯನ್ನು ಬಗೆಹರಿಸಲು ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಿಲ್ಲೆಗೆ ತರಲಾಗಿದೆ. ತುಮಕೂರು-ರಾಯದುರ್ಗ ರ್ಯೆಲು ಮಾರ್ಗ ಶೀಘ್ರ ಪೂರ್ಣಗೊಳಿಸುವಲ್ಲಿ ಸಾಕಷ್ಟು ಶ್ರಮಿಸುತ್ತಿದ್ದೆನೆ, ಜಿಲ್ಲೆಯ ಸಮಸ್ಯೆಗಳನ್ನು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಲಾಗಿದೆ. ಅನುದಾನವನ್ನು ಪ್ರಮುಖವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಸರಿಯಾಗಿ ತಲುಪಿಸಲು ಕ್ರಮವಹಿಸಬೇಕು ಎಂದರು.
ಕೇಂದ್ರ ಸರ್ಕಾರದಿಂದ ಜನ ಕಲ್ಯಾಣಕ್ಕಾಗಿ ಹಲವು ಯೋಜನೆಗಳ ಅನುದಾನ ಬಿಡುಗಡೆ ಮಾಡಲಾಗಿದೆ
Leave a comment
Leave a comment