ಡಾ.ಜಗದೀಶ್
ತುಮಕೂರು: ಬೇರೆ ಬೇರೆ ವಿಷಯಗಳಿಗೆ ಹೋಲಿಸಿದರೆ ಎಂಬಿಎ ಅತೀ ಹೆಚ್ಚು ಬೇಡಿಕೆಯುಳ್ಳ ಕೋರ್ಸ್, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿವಹಿಸಿ ಹೆಚ್ಚಿನ ಸಾಧನೆಯತ್ತ ಮುನ್ನುಗಬೇಕು ಎಂದು ಮೈಸೂರಿನ ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಜಗದೀಶ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ವತಿಯಿಂದ ಹಮ್ಮಿಕೊಂಡ “ಏಲೇಷಿಯಾ-೨ಕೆ೨೩” ಉದ್ಘಾಟಿಸಿ ಮಾತನಾಡಿದ ಅವರು, ಎಂಬಿಎ ಕೋರ್ಸ್ ಪೂರ್ಣಗೊಳಿಸಿದದ ನಂತರ ವಿದ್ಯಾರ್ಥಿಗಳು ಪ್ರತಿ ತಿಂಗಳು ೧ ಲಕ್ಷಕ್ಕಿಂತ ಅಧಿಕ ಸಂಬಳವನ್ನು ಪಡೆಯುತ್ತಿದ್ದಾರೆ. ತರಗತಿ ಶಿಕ್ಷಣದ ಜೊತೆಗೆ ಸಾಮಾಜಿಕ ಶಿಕ್ಷಣವು ಕೂಡ ವಿದ್ಯಾರ್ಥಿಗಳಿಗೆ ಅವಶ್ಯಕ. ಎಲ್ಲಾ ವಿಷಯಗಳಲ್ಲೂ ಆಸಕ್ತಿಯಿಂದ ಭಾಗವಹಿಸಬೇಕೆಂದರು.
ಐಐಎಂನಲ್ಲಿ ಎಂಬಿಎ ಪಡೆದ ಹಲವಾರು ವಿದ್ಯಾರ್ಥಿಗಳು ವರ್ಷಕ್ಕೆ ಒಂದು ಕೋಟಿಗೂ ಅಧಿಕ ವೇತನ ಪಡೆಯುತ್ತಿದ್ದು, ಅತಿ ಹೆಚ್ಚು ಬೇಡಿಕೆಯಿರುವ ಕೋರ್ಸ್ ಇದಾಗಿದೆ. ಭಾರತದ ಆರ್ಥಿಕ ಸ್ಥಿತಿಗತಿಯಲ್ಲಿಯೂ ಮ್ಯಾನೇಜ್ಮೆಂಟ್ ಬಹಳ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಂಜೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಖ್ಯಾತ ಚಲನಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ಪವನ ಒಡೆಯರ್, ಸರಿಗಮಪ ಖ್ಯಾತಿಯ ವೇಣುಗೋಪಾಲ್, ಭೂಸಿರಿ ಅಸೆಟ್ಸ್ ಮತ್ತು ಕನ್ಟ್çಕ್ಷನ್ಸ್ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ.ಕೆ.ಬಿ ಭಾಗಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಅಜಮತ್ ಉಲ್ಲಾ ಪ್ರಾಧ್ಯಪಕರಾದ ಶೋಭಾ.ಬಿ.ಹೆಚ್, ಡಾ. ರಾಜೇಶ್ವರಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು