ತುಮಕೂರು-ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಕೆ, ೭ ಡಿ ಯನ್ನು ರದ್ದುಪಡಿಸಿ ಹಾಗೂ ಆಶ್ರಯ ಯೋಜನೆಯಡಿಯಲ್ಲಿ ನಿವೇಶನ ನೀಡದಿರುವ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಸ್ವಾತಂತ್ರ÷್ಯ ಉದ್ಯಾನವನದಲ್ಲಿಂದು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ತುಮಕೂರು ನಗರದಿಂದ ಪ್ರೊ. ಬಿ. ಕೃಷ್ಣಪ್ಪ ಬಣದ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ತೆರಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ಪ್ರತಿಭಟನೆಗೆ ಹೊರಡುವ ಮುನ್ನ ಮಾತನಾಡಿದ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತುಮಕೂರು ಜಿಲ್ಲೆ ವತಿಯಿಂದ ದಲಿತ ಸಂಘಟನೆಗಳ ಪದಾಧಿಕಾರಿಗಳು ತೆರಳುತ್ತಿದ್ದೇವೆ. ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಕಹಳೆ ಮೊಳಗಿಸಲಾಗುವುದು ಎಂದರು.
ಪರಿಶಿಷ್ಟರಿಗೆ ಮೀಸಲಿಟ್ಟ ಹಣಕ್ಕಾಗಿ ಕಾಂಗ್ರೆಸ್ ಸರ್ಕಾರ, ದಲಿತರ ಪರ ಎಂದು ಬಿಂಬಿಸಿಕೊಳ್ಳಲು ಹಾತೊರೆಯುವ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ನಿಜಕ್ಕೂ ತಮ್ಮ ನಿಜರೂಪ ತೋರಿಸ ತೊಡಗಿದ್ದಾರೆ. ಆಡಳಿತಕ್ಕೆ ಬರುವಂತಹ ಎಲ್ಲಾ ಸರ್ಕಾರಗಳು ದಲಿತರನ್ನು ನಂಬಿಸಿ ವಂಚನೆ ಮಾಡುತ್ತಿವೆ. ಇದರಿಂದ ಕಾಂಗ್ರೆಸ್ ಪಕ್ಷ ಸಹ ಹೊರತಾಗಿಲ್ಲ ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನವಾದ ಎಸ್ಸಿ-ಎಸ್ಟಿ ಮತ್ತು ಟಿಎಸ್ಪಿಗೆ ಸೇರಿದ ೧೧ ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಸರ್ಕಾರ ಹೊರಟಿದೆ. ಇದು ಅಕ್ಷಮ್ಯ. ೧೧ ಸಾವಿರ ಕೋಟಿಗಳನ್ನು ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ಪರಿಶಿಷ್ಟರಿಗೆ ೫ ಯೋಜನೆಗಳನ್ನು ನೀಡುವುದಾಗಿ ಹೇಳಿ ಟೋಪಿ ಹಾಕುವ ಕೆಲಸ ಸಹಿಸುವುದಿಲ್ಲ ಎಂದರು.
ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಕೆ,
Leave a comment
Leave a comment