ಕಲಬುರಗಿ: ಬಿಜೆಪಿ ರಾಜ್ಯ ಕಾರ್ಯದರ್ಶಿ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಕಾರ್ ಪಲ್ಟಿಯಾಗಿದೆ.
ಭಾನುವಾರ ಬೆಳಗ್ಗೆ 10ಗಂಟೆ ಸುಮಾರಿಗೆ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ಘಟನೆ ನಡೆದಿದ್ದು, ಯಾವುದೇ ಅಪಾಯಗಳು ಸಂಭವಿಸಿಲ್ಲ.
ಶಾಸಕ ಬಸವರಾಜ ಮತ್ತಿಮಡು ಮತ್ತು ಜೊತೆಗಿದ್ದ ಶಹಾಬಾದ ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗೀನಶೆಟ್ಟಿ ಸೇರಿದಂತೆ ಆರು ಜನರಿದ್ದರು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗುಲ್ಬರ್ಗಾ ವಿಶ್ವವಿದ್ಯಾಲಯ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.