ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆಯ ಸಂಚಾರಿ ಪ್ರಚಾರ ವಾಹನಕ್ಕೆ ಸಚಿವ ಡಾ : ಜಿ. ಪರಮೇಶ್ವರ್ ಚಾಲನೆ
ತುಮಕೂರು(ಕ.ವಾ.)ಸೆ.೫ : ಕೃಷಿ ಇಲಾಖೆ ವತಿಯಿಂದ ಆತ್ಮ ನಿರ್ಭರ್ ಯೋಜನೆಯಡಿ ಕೈಗೊಳ್ಳಲಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಕುರಿತು ಪ್ರಚಾರಕ್ಕಾಗಿ ಸಂಚಾರಿ ವಾಹನಕ್ಕೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ : ಜಿ. ಪರಮೇಶ್ವರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ., ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಉಪನಿರ್ದೇಶಕರಾದ ದೀಪಶ್ರೀ, ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆಯ ಸಂಚಾರಿ ಪ್ರಚಾರ
Leave a comment
Leave a comment