ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ NDA ಮೈತ್ರಿ ಕೂಟವು 400 ಕ್ಕಿಂತ ಹೆಚ್ಚಿನ ಸ್ಥಾನವನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಮಾಲೀಕಯ್ಯ್ ಗುತ್ತೇದಾರ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಫರತಹಾಬದ ವಲಯದ ವಿವಿಧ ಗ್ರಾಮಗಳಲ್ಲಿ ಮೋದಿ ಮತ್ತೊಮ್ಮೆ, ಗೋಡೆ ಬರಹ ಹಾಗೂ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಒಟ್ಟಾರೆಯಾಗಿ ಕಾರ್ಯಕರ್ತರು ಎಲ್ಲರೂ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಕಾರ್ಯ ಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯ ಕರ್ತರು ಈ ಅಭಿಯಾನದಲ್ಲಿ ಭಾಗವಹಿಸಿದರು.