ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ.ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆಯೇ? ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ.ಆದಾಯ ತೆರಿಗೆ ಪಾವತಿಸುವವರ ಬಳಿ, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್ ಇರಬೇಕ? ಅರ್ಹರ ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು.