ತುಮಕೂರು: ನಗರದ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ವಿಶ್ವವಿದ್ಯಾಲಯಕ್ಕೆ ಜುಲೈ ೩೧ರಿಂದ ಆಗಸ್ಟ್ ೨ರವರೆಗೆ ನ್ಯಾಕ್ (ರಾಷ್ಟಿçÃಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ) ಭೇಟಿ ನೀಡಿತ್ತು.
ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಿಗೆ ಶಿಕ್ಷಣ ಗುಣಮಟ್ಟದ ಬಗ್ಗೆ ಮಾನ್ಯತೆ ನೀಡುವ ಈ ಮಂಡಳಿಯು, ಕಳೆದ ಮೂರು ದಿನಗಳ ಭೇಟಿಯಲ್ಲಿ, ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಶ್ರೀ ಸಿದ್ಧಾರ್ಥ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮತ್ತು ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಅಧ್ಯಕ್ಷರು ಸೇರಿದಂತೆ ಹೊರ ರಾಜ್ಯಗಳಿಂದ ಬಂದಿದ್ದ ಆರು ಪರಿಣಿತರನ್ನು ಒಳಗೊಂಡ ತಂಡವು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಶೈಕ್ಷಣಿಕ ಚಟುವಟಿಕೆಗಳು, ಕಾಲೇಜು ಮತ್ತು ಆಸ್ಪತ್ರೆಯಲ್ಲಿರುವ ಪ್ರಯೋಗಾಲಯ ಮತ್ತು ಅಗತ್ಯ ಇರುವ ಸೌಲಭ್ಯಗಳನ್ನು ಪರಿಶೀಲಿಸಿತು, ಈ ವೇಳೆ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರಿಂದ ವೈದ್ಯಕೀಯ, ತಾಂತ್ರಿಕ ಶಿಕ್ಷಣದ ಕೌಶಲ್ಯ, ಶೈಕ್ಷಣಿಕ ಪ್ರಗತಿ, ಸಂಶೋಧನಾ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಕೂಲಂಕಷ ಮಾಹಿತಿ ಪಡೆದರು. ವಿದ್ಯಾರ್ಥಿಗಳು, ಪೋಷಕರು ಹಳೆಯ ವಿದ್ಯಾರ್ಥಿಗಳು ಹಾಗೂ ನೌಕರ ವರ್ಗದವರೊಂದಿಗೆ ಸಂವಾದ ನಡೆಸಿ ಕಾಲೇಜಿನಲ್ಲಿ ಸಿಗುತ್ತಿರುವ ಶಿಕ್ಷಣ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪ್ರತಿಕ್ರಿಯೆ ಪಡೆದರು.
ಸಾಹೇ ವಿಶ್ವವಿದ್ಯಾಲಯದಲ್ಲಿರುವ ಸೌಲಭ್ಯಗಳು ಮತ್ತು ಆಡಳಿತ ವ್ಯವಸ್ಥೆ, ದಾಖಲೆಗಳು, ಡಿಜಿಟಲ್ ಲೈಬ್ರರಿ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಹಾಸ್ಟೆಲ್, ಕ್ರೀಡಾ ಸಮುಚ್ಛಯ, ಆರೋಗ್ಯ ಕೇಂದ್ರ, ಸಮುದಾಯ ರೇಡಿಯೋ, ಟೆಲಿವಿಷನ್ ಸುಡ್ಡಿಯೋ ಸೇರಿದಂತೆ ಎಲ್ಲಾ ಮುಖ್ಯ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳು ಹಾಗೂ ಪ್ರತಿ ಹಂತದ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಶೀಲಿಸಿದರು.