ಪ್ರಧಾನಿಮಂತ್ರಿಯಾಗಿ ನರೇಂದ್ರಮೋದಿ ಇಂದಿಗೆ ೯ ವರ್ಷ ಪೂರೈಸಿದ್ದು,ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೇಘಾ ಪುಡ್ಪಾರ್ಕು,ಹೆಚ್.ಎ.ಎಲ್,ಇಸ್ರೋ ಸೇರಿದಂತೆ ಹಲವಾರು ಮಹತ್ವದ ಕೆಲಸಗಳು ಆಗಿವೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನೀರಾವರಿ,ಕೃಷಿ,ತೋಟಗಾರಿಕೆ,ಕೈಗಾರಿಕೆ ಸೇರಿದಂತೆ ಎಲ್ಲಾ ವಿಧದಲ್ಲಿಯೂ ಜಿಲ್ಲೆ ಅಭಿವೃದ್ದಿ ಕಂಡಿದೆ ಎಂದರು.
ಆರ್ಥಿಕ ತಜ್ಞ ನಂಜುAಡಪ್ಪ ವರದಿ ಅನ್ವಯ ತುಮಕೂರು ಜಿಲ್ಲೆಯ ೮ ತಾಲೂಕುಗಳು ಅತಿ ಹಿಂದುಳಿದ ತಾಲೂಕುಗಳಾಗಿದ್ದವು. ಆದರೆ ಕಳೆದ ೯ ವರ್ಷಗಳಲ್ಲಿ ಮೋದಿಯ ದೂರದೃಷ್ಟಿ ಯೋಜನೆಗಳ ಫಲವಾಗಿ ಇಂದು ಎಲ್ಲಾ ತಾಲೂಕುಗಳು ಮುಂದುವರೆದಿವೆ.ಮಿಷನ್ ಅಮೃತ ಸರೋವರ,ಅಟಲ ಭೂ ಜಲ ಯೋಜನೆಯ ಮೂಲಕ ಕೆರೆಗಳಲ್ಲಿದ್ದ ಹೂಳು ಎತ್ತಿ, ಎಲ್ಲಾ ಕೆರೆಗಳಿಗೆ ಅಂತರಜಲ ವೃದ್ದಿಯಾಗುವಂತೆ ಮಾಡಲಾಗಿದೆ. ಇದರ ಜೊತೆಗೆ ಭದ್ರ ಮೇಲ್ದಂಡೆ ಯೋಜನೆಗೆ ೫೦೦೦ ಕ್ಕೂ ಹೆಚ್ಚು ಕೋಟಿ ಅನುದಾನ ನೀಡಲಾಗಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಜಲ ಸಂವೃದ್ದಿ ಹೆಚ್ಚಾಗಿ, ರೈತರು ಕೃಷಿ ಮಾಡಿ, ಸಮೃದ್ದಿಯ ಜೀವನ ನಡೆಸುತಿದ್ದಾರೆ ಎಂದು ಜಿ.ಎಸ್.ಬಸವರಾಜು ನುಡಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಸಿರಿಧಾನ್ಯ ಕೃಷಿಗೆ ಉತ್ತೇಜನ ನೀಡಲು ಪ್ರತಿ ಹೆಕ್ಟೇರ್ಗೆ ೧೦ ಸಾವಿರ ರೂ ಪ್ರೋತ್ಸಾಹಧನ ನೀಡಲಾಗುತ್ತಿದೆ.ಅಲ್ಲದೆ ತೋಟಗಾರಿಕೆ ಇಲಾಖೆಯ ಒಂದು ಜಿಲ್ಲೆ, ಒಂದು ಉತ್ಪನ್ನದಲ್ಲಿ ತೆಂಗು ಆಯ್ಕೆಯಾಗಿದ್ದು, ಮೌಲ್ಯವರ್ಧಿತ ತೆಂಗಿನ ಉತ್ಪನ್ನಗಳು ಹೇರಳವಾಗಿವೆ.ಕೃಷಿ ಸಂಶೋಧನಾ ಸಂಸ್ಥೆ ಹಿರೇಹಳ್ಳಿಯ ಮೂಲಕ ಕೇಂದ್ರದ ಎಂ.ಡಿ.ಐ ಯೋಜನೆಯಡಿ ಡ್ಯಾಗ್ರನ್ ಪ್ರೂಟ್ಗೆ ಸಂಬAಧಿಸಿದ ಸೆಂಟರ್ಅಫ್ ಎಕ್ಸಲೆನ್ಸ್ ಸ್ಥಾಪಿಸಲು ಅನುಮೋಧನೆ ದೊರೆತಿರುವುದು ಸಂತೋಷದ ವಿಚಾರವಾಗಿದೆ ಎಂದರು.
ಪ್ರಧಾನಿಮಂತ್ರಿಯಾಗಿ ನರೇಂದ್ರಮೋದಿ ಇಂದಿಗೆ ೯ ವರ್ಷ
Leave a comment
Leave a comment