ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟಿçÃಯ ವೈದ್ಯರ ದಿನಾಚರಣೆ
ಡಾ.ಬಿ.ಸಿ.ರಾಯ್ರವರ ಆದರ್ಶಗಳನ್ನು ಪ್ರತಿಯೊಬ್ಬ ವೈದ್ಯರು ಬೆಳೆಸಿಕೊಳ್ಳಬೇಕು : ಡಾ.ಎಂ.ಆರ್.ಹುಲಿನಾಯ್ಕರ್
ತುಮಕೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು, ೧೯೪೮-೧೯೬೨ ರವರೆಗೆ ಸುಮಾರು ೧೪ ವರ್ಷಗಳ ಕಾಲ ಭಾರತದ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು, ಅವರು ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಹುದ್ದೆಯಲ್ಲಿದ್ದರು. ಇತಿಹಾಸದಲ್ಲಿ ಕೆಲವರು ತಮ್ಮ ಎಫ್.ಆರ್.ಸಿ.ಎಸ್. ಮತ್ತು ಎಂ.ಆರ್.ಸಿ.ಪಿ. ಏಕಕಾಲದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಪದವಿಯನ್ನು ಪಡೆದರು. ತಮ್ಮ ಅನುಭವ ಮತ್ತು ಸಹದ್ಯೋಗಿಗಳೊಂದಿಗೆ ಉತ್ತಮ ಆರೋಗ್ಯ ಸೇವೆಗಳ ಜನಸಾಮಾನ್ಯ ರಿಗೆ ದೊರಕುವಂತೆ ಸೇವೆ ನಿರ್ವಹಿಸಬೇಕು. ಭಾರತದಲ್ಲಿ ರಾಷ್ಟಿçÃಯ ವೈದ್ಯರ ದಿನವನ್ನು ಪ್ರತಿ ವರ್ಷ ಜುಲೈ ೧ ರಂದು ಹುಟ್ಟಿದ ದಿನ ಮತ್ತು ಮರಣ ಹೊಂದಿದ ದಿನಾಂಕವನ್ನು ಆಚರಿಸಲಾಗುತ್ತದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ರವರು ತಿಳಿಸಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಜುಲೈ ೩ ರಂದು ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಅಡಿಟೋರಿಯಂ ಸಭಾಂಗಣದಲ್ಲಿ ರಾಷ್ಟಿçÃಯ ವೈದ್ಯರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹಿರಿಯರಾದ ಡಾ.ಬಿ.ಸಿ.ರಾಯ್ರವರು ಹಾಕಿಕೊಟ್ಟ ಮಾರ್ಗದರ್ಶನ, ಜೀವನ ಶೈಲಿ, ಸಮಾಜದ ರಾಜಕೀಯವಾಗಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಗಣನೀಯ ಸೇವೆಗಳನ್ನು ಸ್ಮರಿಸುವುದು ಅದೇ ದಾರಿಯಲ್ಲಿ ನಮ್ಮ ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವುದು ಹೆಚ್ಚು ಸೂಕ್ತವಾಗಿರುತ್ತದೆ.
ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಎಂ. ಹುಲಿನಾಯ್ಕರ್ರವರು ಮಾತನಾಡುತ್ತಾ ಪ್ರತಿ ವರ್ಷವೂ ಭಾರತ ಸರ್ಕಾರ ಡಾ.ಬಿ.ಸಿ.ರಾಯ್ರವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಡಾ.ಬಿ.ಸಿ.ರಾಯ್ರವರ ಬದುಕು ಮತ್ತು ಅವರು ಅನುಸರಿಸಿದ ಮಾರ್ಗಗಳು ವೈದ್ಯರಿಗೆ ದಾರಿದೀಪವಾಗಬೇಕು, ಇಂತಹ ನಿಸ್ವಾರ್ಥ ಸಾಧಕರು ಹಾಕಿಕೊಟ್ಟ ಮಾರ್ಗಗಳನ್ನು ನಾವುಗಳೆಲ್ಲ ನಡೆಯುವುದೇ ಡಾ.ಬಿ.ಸಿ.ರಾಯ್ರವರ ಅವರಂತಹ ಮಹಾಚೇತನ ನಾವು ಸಲ್ಲಿಸುವ ಅತ್ಯುತ್ತಮ ಗೌರವಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್ರವರು ಮಾತನಾಡುತ್ತಾ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. ಡಾ.ಬಿ.ಸಿ.ರಾಯ್ರವರು ನಿಸ್ವಾರ್ಥಸೇವೆ ಯುವ ವೈದ್ಯರಿಗೆ ದಾರಿದೀಪವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ಉಪಪ್ರಾಂಶುಪಾಲರು ಮತ್ತು ಪ್ರಸ್ತೂತಿ ಮತ್ತು ಸ್ತಿçÃರೋಗ ವೈದ್ಯರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಟಿ.ಜಿ.ದೀಪಕ್ರವರಿಗೆ ೨೦೨೨-೨೩ ನೇ ಸಾಲಿನೇ ಡಾ.ಬಿ.ಸಿ.ರಾಯ್ರವರು ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.
ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಲ್.ಹರೇAದ್ರಕುಮಾರ್, ಶ್ರೀದೇವಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಕೆ.ಮೋಹನ್ಕುಮಾರ್, ಶ್ರೀದೇವಿ ವೈದ್ಯಕೀಯ ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞರಾದ ಡಾ.ಲಾವಣ್ಯ, ಶ್ರೀದೇವಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಟಿ.ಜಿ.ದೀಪಕ್, ಡಾ.ಹೇಮಂತ್ರಾಜ್, ಡಾ.ಸೌಮ್ಯ, ಡಾ.ಕುಸುಮ, ಶ್ರೀದೇವಿ ಸಂಸ್ಥೆಯ ಆಡಳಿತಾಧಿಕಾರಿ ಟಿ.ವಿ.ಬ್ರಹ್ಮದೇವಯ್ಯ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಸಿಬ್ಬಂದಿ ವರ್ಗ, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮ ದಲ್ಲಿ ಭಾಗವಹಿಸಿದರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ, ರಾಷ್ಟ್ರೀಯ ವೈದ್ಯರ ದಿನಾಚರಣೆ

Leave a comment
Leave a comment


