ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೊಸದಾಗಿ ನವಜಾತ ಶಿಶುಗಳ ಎನ್ಐಸಿಯು, ಪಿಐಸಿಯು, ಲೇಬರ್ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನೆ
ತುಮಕೂರು: ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ‘ಹೊರರೋಗಿಗಳ ವಿಸ್ತರಣಾ ಘಟಕದಲ್ಲಿ ಹೊಸದಾಗಿ ನವಜಾತ ಶಿಶುಗಳ ಎನ್ಐಸಿಯು, ಪಿಐಸಿಯು, ಲೇಬರ್ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನೆಯನ್ನು ಇದೇ ಮೇ 6ಕ್ಕೆ ಬೆಳಗ್ಗೆ 10ಗಂಟೆಗೆ ವೈದ್ಯಕೀಯ ಕಾಲೇಜಿನಲ್ಲಿ ಉದ್ಘಾಟಿಸಲಾಗುವುದು ಎಂದು ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಜಿ ಎನ್ ಪ್ರಭಾಕರ್ ತಿಳಿಸಿದರು.
ಪತ್ರಿಕಾಗೋಷಿಯಲ್ಲಿ ಮಾತನಾಡಿ ಅವರು, ತುಮಕೂರಿನಂತಹ ನಗರದಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಸಿದ್ಧಾರ್ಥ ಆಸ್ಪತ್ರೆಯಲ್ಲಿ ಆಧುನಿಕ ಉಪಕರಣಗಳನ್ನು ಅಳವಡಿಸಿಕೊಂಡು ಚಿಕಿತ್ಸಾ ವಿಧಾನವನ್ನು ಮೇಲ್ದೆರ್ಜೆಗೆರಿಸಿ ಬಡವರಿಗೂ ಲಭ್ಯವಾಗುವ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ, ಆ ನಿಟ್ಟಿನಲ್ಲಿ ಎನ್ಐಸಿಯು, ಪಿಐಸಿಯು, ಲೇಬರ್ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಬಿ ಸಾಣಿಕೊಪ್ ಮಾತನಾಡಿ, ಮೇ 6ರಂದು ಬೆಳಗ್ಗೆ 10 ಗಂಟೆಗೆ ಎನ್ಐಸಿಯು, ಪಿಐಸಿಯು, ಹೆರಿಗೆ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್ ಉದ್ಘಾಟನೆಯನ್ನು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ.
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಕನ್ನಿಕಾ ಪರಮೇಶ್ವರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಹೇ ಉಪಕುಲಪತಿ ಡಾ ಕೆ ಬಿ ಲಿಂಗೇಗೌಡ, ಸಾಹೇ ರಿಜಿಸ್ಟಾçರ್ ಡಾ.ಎಂ.ಝೆಡ್ ಕುರಿಯನ್, ಸಾಹೇ ವಿವಿಯ ಪರೀಕ್ಷಾ ನಿಯಂತ್ರಣಕರಾದ ಡಾ ಗುರುಶಂಕರ್, ವೈದ್ಯಕೀಯ ಮೇಲ್ವಿಚಾರಕರಾದ ಡಾ.ಎನ್ ಎಸ್ ವೆಂಕಟೇಶ್, ಸಾಹೇ ವಿವಿಯ ಕುಲಾಧಿಪತಿ ಸಲಹೆಗಾರರಾದ ಡಾ ವಿವೇಕ್ ವೀರಯ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಹೊಸದಾಗಿ ನವಜಾತ ಶಿಶುಗಳ ಎನ್ಐಸಿಯು, ಪಿಐಸಿಯು, ಲೇಬರ್ ಕೊಠಡಿ,
Leave a comment
Leave a comment