ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಚಾರ
ತುಮಕೂರಿನ ಹಲವೆಡೆ ಸೊಗಡು ಶಿವಣ್ಣ ಮಿಂಚಿನ ಮತಯಾಚನೆ
ತುಮಕೂರು: ನಗರದ ಪ್ರಜ್ಞಾವಂತ ಮತ್ತು ಸ್ವಾಭಿಮಾನಿ ಮತದಾರರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಲಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಸಚಿವರಾದ ಸೊಗಡು ಶಿವಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇವರು ಇಂದು ನಗರದ ಹಲವೆಡೆ ಮತಯಾಚನೆ ಮಾಡುತ್ತಾ ಅರಳೇಪೇಟೆ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಪ್ರದೇಶ ವ್ಯಾಪ್ತಿಯಲ್ಲಿ ಸೊಗಡು ಶಿವಣ್ಣ ಬೆಂಬಲಿತ ಸ್ವಾಭಿಮಾನಿ ಕಾರ್ಯಕರ್ತರು ಸ್ಥಳೀಯವಾಗಿ ಮತಯಾಚನೆ ಮಾಡಿದ ಸಂಧರ್ಭದಲ್ಲಿ ನಗರದಲ್ಲಿ ಜನರಿಗೆ ಸಿಗಬೇಕಾದ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರಿ ಕಛೇರಿಗಳು ಲಂಚದ ಕೇಂದ್ರಗಳಾಗಿ ಮಾರ್ಪಟ್ಟಿದ್ದು, ಕಾನೂನು ಸುವ್ಯವಸ್ಥೆಗಳ ಬಗ್ಗೆ ಜನ ಗಂಭೀರವಾಗಿ ಚರ್ಚಿಸುತ್ತಿದ್ದಾರೆ. ಕಳೆದ ೫ ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳು ಬಹುತೇಕ ಕಳಪೆ ಮತ್ತು ಅವೈಜ್ಞಾನಿಕವಾಗಿದ್ದು ಇದರಿಂದ ನಾಗರೀಕರು ನಾನಾ ಕಷ್ಟಗಳಿಗೆ ಗುರಿಯಾಗಿದ್ದು ಹಿಡಿ ಶಾಪ ಹಾಕುತ್ತಿದ್ದಾರೆ. ಸಮಗ್ರ ಹಿತ ಚಿಂತನೆ ಇಲ್ಲದ ಹಾಲಿ ಶಾಸಕನ ಅಪ್ರಬುಧ್ಧ ಹಾಗೂ ಬೇಜವಾಬ್ದಾರಿ ಕಾರಣಗಳಿಂದ ನಗರದ ಎಲ್ಲೆಡೆ ಜನತೆ ಪರಿತಪಿಸುವಂತಾಗಿದೆ ಎಂದು ಸೊಗಡು ಶಿವಣ್ಣ ವಿವರಿಸಿದರು.
ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣ ಮಿಂಚಿನ ಮತಯಾಚನೆ

Leave a comment
Leave a comment


