ತಾಯಿ-ಶಿಶು ಮರಣ ಪ್ರಕರಣಗಳ ಪ್ರಮಾಣವನ್ನು ಇಳಿಸಲು ಸೂಚನೆ
ತುಮಕೂರು(ಕ.ವಾ)ಮೇ.೨೦: ಜಿಲ್ಲೆಯಲ್ಲಿ ೨೦೨೨ರ ಡಿಸೆಂಬರ್ ಮಾಹೆಯಿಂದ ೨೦೨೩ರ ಏಪ್ರಿಲ್ ಮಾಹೆಯವರೆಗೆ ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಮಧುಗಿರಿ, ಪಾವಗಡದಲ್ಲಿ ತಲಾ ೧ ಹಾಗೂ ತುಮಕೂರಿನಲ್ಲಿ ೪ ಸೇರಿದಂತೆ ಒಟ್ಟು ೮ ತಾಯಿ ಮರಣ ಪ್ರಕರಣ ಮತ್ತು ೧೫೮ ಶಿಶು ಮರಣ ಪ್ರಕರಣ ವರದಿಯಾಗಿದ್ದು, ತಾಯಿ-ಶಿಶು ಮರಣ ಪ್ರಕರಣಗಳ ಸಂಖ್ಯೆಯನ್ನು ಇಳಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿAದು ಆರೋಗ್ಯ ಇಲಾಖೆಗೆ ಸಂಬAಧಿಸಿದ ವಿವಿಧ ಸಭೆಗಳ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತಾಯಿ-ಶಿಶು ಮರಣ ಪ್ರಕರಣಗಳು ವರದಿಯಾಗದಂತೆ ವೈದ್ಯಾಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದರಲ್ಲದೆ, ಜಿಲ್ಲೆಯಲ್ಲಿ ೨೦೨೨ರ ಏಪ್ರಿಲ್ ಮಾಹೆಯಿಂದ ೨೦೨೩ರ ಮಾರ್ಚ್ ಮಾಹೆಯವರೆಗೆ ವರದಿಯಾದ ೩೧೦೦೬ ಹೆರಿಗೆ ಪ್ರಕರಣಗಳ ಪೈಕಿ ೧೯೬೬೫ ಸಿe಼ೆÃರಿಯನ್(ಸಿ-ಸೆಕ್ಷನ್) ಹೆರಿಗೆ ಪ್ರಕರಣಗಳು ವರದಿಯಾಗಿವೆ. ಹೆರಿಗೆ ಪ್ರಕರಣಗಳನ್ನು ಅವಲೋಕಿಸಿದಾಗ ಶೇ. ೬೩ರಷ್ಟು ಸಿ-ಸೆಕ್ಷನ್ ಹೆರಿಗೆಗಳಾಗಿದ್ದು, ಸಿ-ಸೆಕ್ಷನ್ ಹೆರಿಗೆ ಪ್ರಮಾಣವನ್ನು ಶೇ. ೩೦ಕ್ಕೆ ಇಳಿಸುವ ಗುರಿಯನ್ನು ಹೊಂದಬೇಕು ಎಂದ ಅವರು ತಾಲ್ಲೂಕುವಾರು ತಾಯಿ ಮತ್ತು ಶಿಶು ಮರಣ ಪ್ರಕರಣಗಳ ಮಾಹಿತಿ ಪಡೆದರು. ತಾಯಿ-ಶಿಶು ಮರಣ ಸಂಭವಿಸಿದರೆ ಸಂಬAಧಿಸಿದ ವೈದ್ಯರನ್ನು ಹೊಣೆಗಾರಿಕೆ ಮಾಡಲಾಗುವುದು ಎಂದು ನಿರ್ದೇಶನ ನೀಡಿದರು.
ಶೂನ್ಯ ಹೆರಿಗೆ ಪ್ರಕರಣ ವರದಿಯಾಗುವ ಜಿಲ್ಲಾಸ್ಪತ್ರೆ ಮತ್ತಿತರ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಹೆರಿಗೆಗೆ ಬರುವ ಗರ್ಭಿಣಿಯರಿಗೆ ಸಾಮಾನ್ಯ ಹೆರಿಗೆ ಮಾಡಿಸುವ ಪ್ರಯತ್ನ ಮಾಡಬೇಕು. ಸಾಮಾನ್ಯ ಹೆರಿಗೆ ಸಾಧ್ಯವಿಲ್ಲವೆಂದಾಗ ಮಾತ್ರ ಸಿe಼ÉÃರಿಯನ್ ಹೆರಿಗೆ ಮಾಡಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳು ಬಳಸಿಕೊಂಡು ಗುಣಮಟ್ಟದ ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ದೊರಕಿಸಿ ಕೊಡಬೇಕು ಎಂದರು.
ದಡಾರ-ರುಬೆಲ್ಲಾ ನಿಮೂರ್ಲನೆಗಾಗಿ ಕಟ್ಟಡ ಕಾರ್ಮಿಕರ ಹಾಗೂ ಇತರೇ ವಲಸೆ ಪ್ರದೇಶಗಳಲ್ಲಿರುವ ೫ ವರ್ಷದೊಳಗಿನ ಲಸಿಕೆ ಪಡೆಯದ ಮಕ್ಕಳನ್ನು ಗುರುತಿಸಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ವಯಸ್ಸಿಗನುಗುಣವಾಗಿ ದಡಾರ-ರುಬೆಲ್ಲಾ ಲಸಿಕೆ ಹಾಕಿಸುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಮಟ್ಟದ ಜನರಲ್ಲಿ ದಡಾರ-ರುಬೆಲ್ಲಾ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಪ್ರತಿ ತಿಂಗಳು ವಿವಿಧ ಮಾಹಿತಿ-ಶಿಕ್ಷಣ ನೀಡುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.
ವಾಹನ ಚಾಲಕರಿಗೆ ತಂಬಾಕಿನಿAದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಸೂಚನೆ
ತಂಬಾಕು ಉತ್ಪನ್ನಗಳನ್ನು ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ವಾಹನ ಚಾಲಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಕೆ.ಎಸ್.ಆರ್.ಟಿ.ಸಿ.ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವ ಮೂಲಕ ೨೦೨೩ರ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಬೇಕು. ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ನಗರದ ಟೌನ್ ಹಾಲ್ ವೃತ್ತದಿಂದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ತಿಳಿಸಿದರು