ಟೇಕರ್ಗಳನ್ನು ನೇಮಿಸಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ ೧೪೦೦ ಕೇರ್ ಟೇಕರ್ಗಳನ್ನು ಗುರುತಿಸಲಾಗಿದ್ದು, ೭೦೦ ಕೇರ್ ಟೇಕರ್ಗಳಿಗೆ ತರಬೇತಿ ನೀಡಲಾಗಿದೆ. ಕೇರ್ ಟೇಕರ್ಗಳು ಕೂಸಿನ ಮನೆಯಲ್ಲಿ ಮಕ್ಕಳನ್ನು ಪ್ರಾಮಾಣಿಕವಾಗಿ ಮಮತೆ ವಾತ್ಸಲ್ಯದಿಂದ ಆರೈಕೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪೌಷ್ಠಿಕ ಆಹಾರದಿಂದ ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಉತ್ತಮವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ದಿನ ಪ್ರತಿ ಮಗುವಿಗೆ ತಲಾ ೧೨ ರೂ. ಖರ್ಚಿನಲ್ಲಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುವುದು. ಆರೋಗ್ಯದಾಯಕ ಮಕ್ಕಳು ವಿದ್ಯಾವಂತರಾಗಿ ಮುಂದೊAದು ದಿನ ತಮ್ಮ ಕುಟುಂಬದ ಬಡತನವನ್ನು ದೂರ ಮಾಡಲಿದ್ದಾರೆ ಎಂಬ ವಿಶ್ವಾಸವಿದೆಯೆಂದರು.
ಗ್ರಾಮೀಣ ಪ್ರದೇಶದವರು ಅದರಲ್ಲೂ ಮಹಿಳೆಯರನ್ನು ಸಬಲರನ್ನಾಗಿ ಮಾಡುವ ದೃಷ್ಟಿಯಿಂದ ಸರ್ಕಾರ ಜಾರಿಗೆ ತಂದಿರುವ ೫ ಗ್ಯಾರಂಟಿ ಯೋಜನೆಗಳೂ ಯಶಸ್ಸು ಕಂಡಿವೆ. ಈವರೆಗೂ ಶಕ್ತಿ ಯೋಜನೆಯಡಿ ಜಿಲ್ಲೆಯ ೩.೫೦ ಕೋಟಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ೫,೯೬,೦೦೦ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ೧೬೩ ಕೋಟಿ ರೂ. ಖರ್ಚು ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷಿö್ಮ ಯೋಜನೆ ಮೂಲಕ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ಪಾವತಿಸಲಾಗುತ್ತಿರುವ ೨,೦೦೦ ರೂ. ಹಣವನ್ನು ಒಡವೆ-ವಸ್ತçಕ್ಕೆಂದು ದುಂದು ವೆಚ್ಚ ಮಾಡದೆ ಮನೆಯ ಖರ್ಚು, ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯಯಿಸಬೇಕು ಎಂದು ತಿಳಿಸಿದರಲ್ಲದೆ ಈವರೆಗೆ ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯ ೫,೭೭,೦೦೦ ಮಹಿಳೆಯರ ಖಾತೆಗೆ ೩೪೬ ಕೋಟಿ ರೂ. ಹಣವನ್ನು ಜಮೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾದರೂ, ಯೋಜನೆಗೆ ಸಂಬAಧಿಸಿದAತೆ ಬರುವ ಟೀಕೆ ಟಿಪ್ಪಣಿಗಳಿಗೆ ಚಿಂತಿಸುವುದಿಲ್ಲ. ರಾಜ್ಯದ ಜನತೆ ನೆಮ್ಮದಿಯಿಂದ ಬದುಕಬೇಕೆಂಬುದೇ ನಮ್ಮ ಸರ್ಕಾರದ ಉದ್ದೇಶವೆಂದು ತಿಳಿಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಮಹಿಳೆ ಆರ್ಥಿಕವಾಗಿ ಸಬಲಳಾಗಬೇಕಾದರೆ ದುಡಿದು ಗಳಿಸಬೇಕು. ಆದರೆ ತಾಯಿಯಾದ ನಂತರ ಮಗುವಿನ ಲಾಲನೆ-ಪಾಲನೆಯೊಂದಿಗೆ ಸುಮಾರು ವರ್ಷಗಳನ್ನು ಕಳೆಯಬೇಕಾದ ಅನಿವಾರ್ಯತೆ ಅವಳಿಗಿರುತ್ತದೆ. ತಾಯಿ ತನ್ನ ಮಗುವನ್ನು ಬಿಟ್ಟು ನೆಮ್ಮದಿಯಿಂದ ದುಡಿಯಲು ಸಾಧ್ಯವಿಲ್ಲವೆಂಬುದನ್ನು ಮನಗಂಡು ಕೂಸಿನ ಮನೆ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೂಲಿ ಕಾರ್ಮಿಕ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, ನರೇಗಾ ಕೂಲಿ ಕಾರ್ಮಿಕರು ದುಡಿಮೆ ವೇಳೆಯಲ್ಲಿ ಅವರ ಹಸುಗೂಸನ್ನು ನೋಡಿಕೊಳ್ಳುವುದು ಹಾಗೂ ಮಗುವಿಗೆ ಸಮಗ್ರ ಆರೋಗ್ಯ ಭದ್ರತೆ ಒದಗಿಸುವುದು ಕೂಸಿನ ಮನೆಯ ಮೂಲ ಉದ್ದೇಶ ಎಂದು ತಿಳಿಸಿದರಲ್ಲದೆ, ಜಿಲ್ಲೆಯ ಆಯ್ದ ೧೭೫ ಕೂಸಿನ ಮನೆಗಳಿಗೆ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ. ಕೂಸಿನ ಮನೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯದೊಂದಿಗೆ ಅಡುಗೆ ಕೋಣೆ, ಕಲಿಕಾ ಕೊಠಡಿ, ಮಕ್ಕಳ ಆಟಿಕೆ/ಕಲಿಕಾ ಸಾಮಗ್ರಿಗಳ ವ್ಯವಸ್ಥೆ ಮಾಡಲಾಗಿದೆಯಲ್ಲದೆ, ಮಕ್ಕಳ ವೈಯಕ್ತಿಕ ಸ್ವಚ್ಛತೆ, ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ದೇವಲಾಪುರ ಗ್ರಾಮಪಂಚಾಯತಿ ಅಧ್ಯಕ್ಷ ಸಿದ್ಧರಾಜು ಮಾತನಾಡಿದರು. ಇದಕ್ಕೂ ಮುನ್ನ ಗೃಹ ಸಚಿವರು ಕೂಸಿನ ಮನೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕೂಸಿನ ಮನೆ ಕಾರ್ಯವಿಧಾನ ಕುರಿತು ಜಿಲ್ಲಾ ಪಂಚಾಯತಿ ಐಇಸಿ ಕೋಆರ್ಡಿನೇಟರ್ ಗಿರೀಶ್ ಅವರು ತಯಾರಿಸಿದ ಸಾಕ್ಷö್ಯಚಿತ್ರವನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ದೇವಲಾಪುರ ಗ್ರಾಮಪಂಚಾಯತಿ ಉಪಾಧ್ಯಕ್ಷೆ ನೇತ್ರಾವತಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ. ಅಶೋಕ್, ವಿವಿಧ ಗ್ರಾಮಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕೇರ್ ಟೇಕರ್ಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.