ಮಧುಗಿರಿ ಶಾಸಕ ಹಾಗೂ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಕೆ.ಎನ್.ರಾಜಣ್ಣ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್(ವಾಸು) ಅವರಿಗೆ ಪ್ರಸ್ತುತ ಸರಕಾರದಲ್ಲಿ ಮಂತ್ರಿಸ್ಥಾನ ನೀಡಬೇಕೆಂದು ಮಾದಿಗ ದಂಡೋರ, ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ಮಹಾಜನ್ ಪರಿವಾರ ಸಂಘಟನೆಗಳ ವತಿಯಿಂದ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ.
ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಸಭೆ ಸೇರಿದ್ದ ಮೂರು ಸಂಘಟನೆಗಳ ಮುಖಂಡರು ದಲಿತ,ಹಿಂದುಳಿದ, ಶೋಷಿತರ ಪರವಾಗಿ ಕೆಲಸ ಮಾಡುತ್ತಿರುವ ಕೆ.ಎನ್.ರಾಜಣ್ಣ ಹಾಗೂ ಸತತವಾಗಿ ಐದನೇ ಬಾರಿಗೆ ಗೆಲುವು ಸಾಧಿಸಿರುವ, ಹಿಂದಿನ ಸಮ್ಮಿಶ್ರ ಸರಕಾರದಲ್ಲಿ ಶಿಕ್ಷಣ ಮಂತ್ರಿಯಾಗಿ ಕೆಲಸ ಮಾಡಿರುವ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸಚಿವಸ್ಥಾನ ನೀಡಬೇಕೆಂದು ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇAದ್ರಸ್ವಾಮಿ,ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೋಡಿಯಾಲ ಮಹದೇವ,ಮಹಾಜನ್ ಪರಿವಾರ ಮತ್ತು ಅಲೆಮಾರಿ ಸಂಘದ ಹಂಚಿಹಳ್ಳಿ ರಾಮು ಸ್ವಾಮಿ, ಹೆಬ್ಬತ್ತನಹಳ್ಳಿ ಶ್ರೀನಿವಾಸ್,ಗೂಳೂರು ರಾಜಣ್ಣ, ಚನ್ನನಕುಂಟೆ ರಂಗನಾಥ ಅವರುಗಳು ಒತ್ತಾಯಿಸಿದ್ದಾರೆ.
ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ವಿ.ರಾಘವೇAದ್ರಸ್ವಾಮೀ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಹೇಗೆ ಅಹಿಂದ ನಾಯಕರೋ,ಅದೇ ರೀತಿ ತುಮಕೂರು ಮಧುಗಿರಿ ಶಾಸಕರಾಗಿರುವ ಕೆ.ಎನ್.ರಾಜಣ್ಣ ಅಹಿಂದ ನಾಯಕ ರಾಗಿದ್ದಾರೆ.ಎಲ್ಲಾ ಶೋಷಿತ ಸಮುದಾಯಗಳನ್ನು ಒಂದೇ ತೆಕ್ಕೆಗೆ ತೆಗೆದುಕೊಂಡು ಬಂದು,ಅವರಿಗೆ ಡಿಸಿಸಿ ಬ್ಯಾಂಕು ಇನ್ನಿತರ ಸಂಘ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ ದಲಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳನ್ನು ಗುರುತಿಸಿ,ಅವರ ಅರ್ಥಿಕ, ಸಾಮಾಜಿಕ, ಶೈಕ್ಷಣಿಕ ಬೆಳೆವಣಿಗೆಗೆ ಪೂರಕವಾದ ಎಲ್ಲಾ ಸಹಕಾರವನ್ನು ನೀಡುತ್ತಾ ಬಂದಿದ್ದಾರೆ.ಇAತಹವರು ಸಚಿವರಾಗಿ ಆಯ್ಕೆಯಾದರೆ ಸಾಮಾಜಿಕ ನ್ಯಾಯ ಎಂಬುದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲು ಸಾಧ್ಯವಾಗುತ್ತದೆ.ಹಾಗಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್,ಅವರ ಹಿರಿತನದ ಜೊತೆಗೆ,ಅವರ ರಾಜಕೀಯ ಅನುಭವವನ್ನು ಪಕ್ಷದ ಮತ್ತು ಸರಕಾರದ ಕಾರ್ಯಕ್ರಮಗಳಲ್ಲಿ ಬಳಕೆ ಮಾಡಿಕೊಳ್ಳುವ ಮೂಲಕ ಬಡವರಿಗೆ, ದೀನದಲಿತರಿಗೆ,ಶೋಷಿತರಿಗೆ ಹೆಚ್ಚಿನ ಅನುಕೂಲವಾಗುವಂತೆ ಮಾಡಬೇಕೆಂದು ನಮ್ಮ ಒತ್ತಾಯವಾಗಿದೆ ಎಂದರು.
ಸಂಘಟನೆಗಳ ವತಿಯಿಂದ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ.
Leave a comment
Leave a comment