ತುಮಕೂರು- ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಗೆ ಇಂದು ೬೧ನೇ ಜನ್ಮದಿನದ ಸಂಭ್ರಮ. ಶ್ರೀಗಳ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಮುಂಜಾನೆಯಿAದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಸಿದ್ದಲಿಂಗ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು. ಎಂದಿನAತೆ ಶ್ರೀಗಳು ಮುಂಜಾನೆಯೇ ಇಷ್ಟಲಿಂಗ ಪೂಜೆ ನೆರವೇರಿಸಿದರು. ನಂತರ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.ಬೆಳಿಗ್ಗೆ ೬ ಗಂಟೆಗೆ ಹಳೇ ಮಠದಲ್ಲಿ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿಯವರು ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಶ್ರೀಗಳ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ವಿವಿಧ ಮಠಾಧೀಶರುಗಳು ಸಹ ಶ್ರೀಗಳ ಪಾದಪೂಜೆ ನೆರವೇರಿಸಿ ಪುಷ್ಪವೃಷ್ಠಿ ಸುರಿಸಿ ಆಶೀರ್ವಾದ ಪಡೆದು ಭಕ್ತಿ ಸಮರ್ಪಿಸಿದರು.ಸಂಸದರಾದ ಜಿ.ಎಸ್. ಬಸವರಾಜು, ಅಣ್ಣಾ ಸಾಹೇಬ್ ಜೊಲ್ಲೆ , ಶಿವಪ್ರಸಾದ್, ರಾಜಶೇಖರ್ ಸೇರಿದಂತೆ ಅನೇಕ ಗಣ್ಯರು, ಭಕ್ತಾದಿಗಳು ಶ್ರೀಮಠಕ್ಕೆ ತೆರಳಿ ಶ್ರೀಗಳು ಭೇಟಿಯಾಗಿ ಹುಟ್ಟುಹಬ್ಬದ ಶುಭಕೋರಿ ಆಶೀರ್ವಾದ ಪಡೆದರು. ಶ್ರೀಮಠದಲ್ಲಿ ಯಾವುದೇ ರೀತಿಯ ಆಡಂಬರದ ಆಚರಣೆ ನಡೆಸದೆ ಧಾರ್ಮಿಕ ವಿಧಿ ವಿಧಾನಗಳಿಂದಷ್ಟೇ ಶ್ರೀಗಳ ಜನ್ಮವರ್ಧಂತಿಯನ್ನು ಆಚರಿಸಿದ್ದು ವಿಶೇಷವಾಗಿತ್ತು. ಶ್ರೀಮಠದ ಮಕ್ಕಳು ಶ್ರೀಗಳ ಜನ್ಮವರ್ಧಂತಿ ಪ್ರಯುಕ್ತ ಸರದಿಯ ಸಾಲಿನಲ್ಲಿ ನಿಂತು ಆಶೀರ್ವಾದ ಪಡೆದರು. ಬೆಳಿಗ್ಗೆಯಿಂದಲೇ ಮಠಕ್ಕೆ ಭಕ್ತಾದಿಗಳು ಆಗಮಿಸುತ್ತಿದ್ದು, ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು