ಕಲಬುರಗಿ : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಜನ್ಮದಿನದ ಪ್ರಯುಕ್ತ ಕಲಬುರಗಿಯ ಎಸ್ ಎಂ ಪಂಡಿತ ರಂಗ ಮಂದಿರದಲ್ಲಿ ಡಿಸೇಂಬರ್ 2 ರಂದು 1100 ಪೌರ ಕಾರ್ಮಿಕರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಲಚ್ಚಪ್ಪ ಜಮಾದಾರ್ ಹೇಳಿದರು. ಅಫಜಲಪೂರದಲ್ಲಿ ಪೌರ ಕಾರ್ಮಿಕರಿಗೆ ಕಾರ್ಯಕ್ರಮಕ್ಕೆ ಅವ್ಹಾನ ನೀಡಿ ಮಾತನಾಡಿದ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರ ಜನ್ಮದಿನದ ಅಂಗವಾಗಿ ನಾವು ಜಿಲ್ಲೆಯ ಸುಮಾರು 1100 ಪೌರ ಕಾರ್ಮಿಕರಿಗೆ ಉಡಿತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಹಾಗಾಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಜೊತೆಗೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವದು ಎಂದರು. ಕಾರ್ಯಕ್ರಮದಲ್ಲಿ ರಾಜ್ಯದ ಹಲವು ಸಚಿವರು ಜಿಲ್ಲೆಯ ಶಾಸಕರು, ಪೌರಕಾರ್ಮಿಕರು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು ಹಾಗಾಗಿ ತಾವೆಲ್ಲರೂ ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.