ಎಸ್ಎಸ್ಐಟಿ ಕ್ಯಾಂಪಸ್ನ ಎಂಬಿಎ ವಿಭಾಗದಲ್ಲಿ ಮಹಿಳಾ ಸಬಲೀಕರಣ ನಿರ್ವಹಣೆ
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನಲ್ಲಿ ಮಹಿಳಾ ಸಬಲೀಕರಣದ ಕುರಿತು ಒಂದು ದಿನದ ವಿಶೇಷ ಕಾರ್ಯಗಾರವನ್ನು ಪದ್ಮಶ್ರೀ ಸಾಲುಮರದ ತಿಮ್ಮಕ್ಕರವರು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ. ವಿದ್ಯಾರ್ಥಿಗಳಿಂದ ಪರಿಸರ ರಕ್ಷಣೆ ಕುರಿತು ಅರಿವು ಮೂಡಿಸುವ ಹಾಗೂ ಸ್ಫೂರ್ತಿದಾಯಕ ಸಾಧಕ ಮಹಿಳೆಯರ ಕಿರು ನಾಟಕವನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ವತಿಯಿಂದ ಆಯೋಜಿಸಿದ್ದ ಹೆಚ್.ಐ.ವಿ ಕುರಿತು ಜಾಗೃತಿ ಮೂಡಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಶೋಭಾ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಹಿಳಾ ಸಬಲೀಕರಣದ ಕುರಿತು ಒಂದು ದಿನದ ವಿಶೇಷ ಕಾರ್ಯಗಾರ ಪದ್ಮಶ್ರೀ ಸಾಲುಮರದ ತಿಮ್ಮಕ್ಕರವರು ಉದ್ಘಾಟನೆ

Leave a comment
Leave a comment