ಪತ್ರಕರ್ತರಾದವರಿಗೆ ತಾಳ್ಮೆ ಬಹುಮುಖ್ಯ, ಒಬ್ಬ ಪತ್ರಕರ್ತ, ಸಣ್ಣ ಸಣ್ಣ ವಿಷಯದಲ್ಲೂ ಖುಷಿಯನ್ನು ಅನುಭವಿಸಬೇಕು, ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಲೇಖನ, ಸುದ್ಧಿಗಳನ್ನು ಬರೆಯುವುದನ್ನು ಕಲಿಯಬೇಕು ಎಂದು ಜನಪದ ಮತ್ತು ಬುಡಕಟ್ಟು ತಜ್ಞ ಹಾಗೂ ಕನ್ನಡ ಪ್ರಾಧ್ಯಾಪಕರ ಡಾ.ಹನಿಯೂರು ಚಂದ್ರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಸಿದ್ಧಪಡಿಸಿದ್ದ ಸಿದ್ಧಾರ್ಥ ಸಂಪದ ಪ್ರಾಯೋಗಿಕ ಪತ್ರಿಕೆಯ ವಿಷೇಶ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.ಪತ್ರಿಕೋದ್ಯಮದ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿದ್ದು, ಅವುಗಳನ್ನು ಎಲ್ಲಾ ವಿದ್ಯಾರ್ಥಿಗಳೂ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗಿ ಹೊರಹೊಮ್ಮಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಬಿ.ಟಿ.ಮುದ್ದೇಶ್, ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗೇಂದ್ರ , ಜ್ಯೋತಿ.ಸಿ, ಶ್ವೇತಾ.ಎಂ.ಪಿ, ಹರೀಶ್ ಕುಮಾರ್.ಬಿ.ಸಿ, ಶಿವಕುಮಾರ್, ರವಿಕುಮಾರ್ ಸೇರಿದಂತೆ ಮಾಧ್ಯಮ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.