ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತç ವಿಭಾಗದ ವತಿಯಿಂದ ಸಿರಾ ತಾಲೂಕಿನ ಚಿಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಜನಪ್ರಿಯ ವಿಜ್ಞಾನ ಕಾರ್ಯಕ್ರಮವನ್ನು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿAಗ್ ವಿಭಾಗದ ಪ್ರಾಧ್ಯಾಪಕ ಡಾ. ಜಗದೀಶ್ ಉದ್ಘಾಟಿಸಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ರಂಗನಾಥ್ ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕೋತ್ತರ ಭೌತಶಾಸ್ತç ವಿಭಾಗದ ವಿದ್ಯಾರ್ಥಿಗಳು ೭೦ಕ್ಕೂ ಹೆಚ್ಚು ಭೌತಶಾಸ್ತçದ ಪ್ರಯೋಗಗಳನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿತ್ತು.
ವಿವಿ ಸ್ನಾತಕೋತ್ತರ ಭೌತಶಾಸ್ತç ವಿಭಾಗದ ಸಂಯೋಜಕ ಹರೀಶ್ ಕುಮಾರ್ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ನಾಗಭೂಷಣ ನಿರೂಪಿಸಿದರು.
ವಿವಿ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತç ವಿಭಾಗದ ಪ್ರಾಧ್ಯಾಪಕರಾದ ಡಾ. ಮಲ್ಲೇಶಪ್ಪ ಜೆ, ಡಾ. ಚೇತನ್ ಪ್ರತಾಪ್ ಕೆ. ಎನ್., ಡಾ. ಪಾಲಾಕ್ಷಮೂರ್ತಿ ಬಿ. ಎಸ್., ಜಿಕೆವಿಕೆಯ ಎ. ಆರ್. ಶ್ರೀನಿವಾಸಯ್ಯ, ಜಿಟಿಟಿಐ ಪ್ರಾಂಶುಪಾಲ ತಿಮ್ಮರಾಜು ಭಾಗವಹಿಸಿದ್ದರು.