ಬೆಂಗಳೂರು: ಇಂದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ Congress ಮೊದಲ ಪಟ್ಟಿ ಬಿಡುಗಡೆ ಆಗಬೇಕಿತ್ತು. ಮುಂದಿನ ಎರಡ್ಮೂರು ದಿನಗಳಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್.. ಇಂದು ಮೊದಲ ಪಟ್ಟಿ ಬಿಡುಗಡೆ ಇಲ್ಲ. ಎಐಸಿಸಿ ಅಧ್ಯಕ್ಷರು ಹಾಗೂ ಜನರಲ್ ಸೆಕ್ರೆಟರಿ ಇಲ್ಲೇ ಇದ್ದಾರೆ. ಎರಡ್ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಅಂತಾ ತಿಳಿಸದರು.