ತುಮಕೂರು, ಮೇ ೧೦- ರಾಜ್ಯ ವಿಧಾನಸಭೆಗೆ ನಿನ್ನೆ ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕೆ ಸಹಕರಿಸಿದ ಪಕ್ಷದ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಮತದಾರರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಅಭಿನಂದನೆಗಳನ್ನು ಸಲ್ಲಿಸಿದರು.
ನಗರದ ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಮಾತನಾಡಿ, ತುಮಕೂರು ಸಂಘಟನಾತ್ಮಕ ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳಾದ ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Tumkur ನಗರದ ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ

Leave a comment
Leave a comment


