ಗೃಹ ಸಚಿವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಭೂಮಿ ಪೂಜೆ ಕಾರ್ಯಕ್ರಮ
ತುಮಕೂರು(ಕ.ವಾ.)ಜು.೨೭: ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಇಂದು ಜುಲೈ ೨೮, ಶುಕ್ರವಾರದಂದು ತುಮಕೂರು ನಗರ ಹಾಗೂ ಕೊರಟಗೆರೆ ತಾಲ್ಲೂಕಿನ ಕೋಳಾಲ, ಕಂಬದಹಳ್ಳಿ ಹಾಗೂ ಕೊರಟಗೆರೆಯಲ್ಲಿ ವಿವಿಧ ಕೆರೆ ಅಭಿವೃದ್ಧಿ ಕಾಮಗಾರಿ, ಅಂಬೇಡ್ಕರ್ ಭವನ ಶಂಕುಸ್ಥಾಪನೆ, ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ, ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಹಾಗೂ ವೃಕ್ಷೆÆÃಧ್ಯಾನ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಇಂದು ಬೆಳಿಗ್ಗೆ ೧೧ ಗಂಟೆಗೆ ತುಮಕೂರು ತಾಲ್ಲೂಕು ಬಡ್ಡಿಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತದನಂತರ ಮಧ್ಯಾಹ್ನ ೧೨ ಗಂಟೆಗೆ ಸ್ಥಳೀಯ ಸಂಸ್ಥೆಗಳಲ್ಲಿನ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸÀಲಿದ್ದಾರೆ. ಕೋಳಾಲ ಗ್ರಾಮದಲ್ಲಿ ಮಧ್ಯಾಹ್ನ ೨ ಗಂಟೆಗೆ ಬಸವೇಶ್ವರ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವರು. ನಂತರ ೨.೪೫ಕ್ಕೆ ಕೋಳಾಲದಲ್ಲಿ ಸಮಾಜ ಕಲ್ಯಾಣ ಇಲಾಖೆಯ ೧೮ ಭವನಗಳ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ ೪ ಗಂಟೆಗೆ ಕೊರಟಗೆರೆ ತಾಲ್ಲೂಕು ಕಂಬದಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವರು, ಸಂಜೆ ೪.೪೫ಕ್ಕೆ ಕೊರಟಗೆರೆ ತಾಲ್ಲೂಕು ಅರಣ್ಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ವೃಕ್ಷೆÆÃದ್ಯಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ೫.೩೦ಕ್ಕೆ ಕೊರಟಗೆರೆ ಪಟ್ಟಣದ ಗೋಕುಲ ಕೆರೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವರು
ಗೃಹ ಮಂತ್ರಿಗಳ ಕಾರ್ಯಕ್ರಮ
Leave a comment
Leave a comment