ತುಮಕೂರು : ಕರ್ನಾಟಕ ರಕ್ಷಣಾ ವೇದಿಕೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ
ನಮ್ಮ ಕಾವೇರಿ ನೀರು ನಮಗೆ ಕುಡಿಯಲು ಇಲ್ಲದೆ ಜಲಾಶಯ ತಳಮಟ್ಟ ಕಾಣುವ ಹಂತ ತಲುಪಿದ್ದರು. ರಾಜ್ಯ ಸರ್ಕಾರ ರಾತ್ರೋ ರಾತ್ರಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ರೈತರು. ನಾಡಿನ ಹಿತ ಬಯಸುವಂತ ನಾನಾ ಸಂಘಟನೆಗಳು. ಹೋರಾಟ ನಡೆಸಿದರು ರಾಜ್ಯ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಿಲ್ಲ ಎಂಬ ಕೂಗು ನಿಂತಿಲ್ಲ. ಅದಕ್ಕಾಗಿ ನಮ್ಮ ರಾಜ್ಯದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಸುತ್ತಲೇ ಇವೆ. ನಾರಾಯಣ ಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ್ರು ತುಮಕೂರಿನ ಜಿಲ್ಲಾಧಿಕಾರಿ ಕಛೇರಿ ಮುಂದೆ ಸಂಘದ ನೂರಾರು ಸದಸ್ಯರೊಂದಿಗೆ ಜಮಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಹಾಕುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಮಯದಲ್ಲಿ ಕರ್ನಾಟಕ ಜಿಲ್ಲಾಧ್ಯಕ್ಷ ಮಾತನಾಡುತ್ತಾ ನಾವು ರಾಜ್ಯ ಸರ್ಕಾರ ಕಾವೇರಿ ನೀರನ್ನು ತಮಿಳುನಾಡುಗೆ ಹರಿಸುತ್ತಿರುವುದನ್ನು ಖಂಡಿಸುತ್ತೇವೆ. ಏಕೆಂದರೆ ನಮಗೆ ಕುಡಿಯಲು ನೀರಿಲ್ಲದ ಸಮಯದಲ್ಲಿ ನೀರು ಹರಿಸುತ್ತಿರುವುದು ಖಂಡನೀಯ ಎಂದರು. ಈ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ ಅಲ್ಲದೆ ರಾಜ್ಯದ ೨೨೪ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಪ್ರತಿಭಟನೆ ವೇಳೆ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಗೌಡ್ರು ಮತ್ತು ಕುಮಾರ್. ಕುಂಬಯ್ಯ. ಕಾಂತರಾಜು. ಮಹಿಳಾ ಘಟಕದ ಸುನಿತ. ನಾಗರತ್ನ. ವೆಂಕಟೇಶ್. ಮಾರುತಿ. ಸಂಘದ ಮತ್ತಿತರ ಪದಾಧಿಕಾರಿಗಳು. ಸಂಘದ ಸದಸ್ಯರು. ಕಾರ್ಯಕರ್ತರು ಭಾಗವಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ
Leave a comment
Leave a comment