ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ,ಕಾರ್ಮಿಕ,ಯುವಜನ ಜನವಿರೋಧಿ ನೀತಿಗಳನ್ನು ಖಂಡಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನವೆಂಬರ್ ೨೬ರಿಂದ ೨೮ರವರೆಗೆ ೭೨ ಗಂಟೆಗಳ ಬೃಹತ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ರೈತರಿಗೆ,ಕಾರ್ಮಿಕರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿದೆ,ಮಾತಿಗೆ ತಪ್ಪಿರುವ ಎರಡು ಸರಕಾರಗಳ ವಿರುದ್ದ ಸುಮಾರು ೫೦ ಸಾವಿರಕ್ಕೂ ಹೆಚ್ಚು ಜನ ರೈತರು, ಕಾರ್ಮಿಕರು, ಯುವಜನರು ಈ ಹೋರಾಟದಲ್ಲಿ ಭಾಗಿಯಾಗುತ್ತಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ತÀಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಸಭೆ, ಕರಪತ್ರ ಹಂಚಿಕೆ,ಜಾಗೃತಿ ಸಭೆಗಳನ್ನು ನಡೆಸಲಾಗಿದೆ ಎಂದರು.
ಕೇAದ್ರದಲ್ಲಿರುವ ನೆರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳನ್ನು ರೈತರ ನಿರಂತರ ೧೩ ತಿಂಗಳ ಹೋರಾಟ ಮತ್ತು ೭೮೦ ಜನರ ಹುತಾತ್ಮರಾದ ನಂತರ ಕಾಯ್ದೆಯನ್ನು ವಾಪಸ್ ಪಡೆದ ಸರಕಾರ,ಆ ಸಂದರ್ಭದಲ್ಲಿ ಕಾನೂನಾತ್ಮಕ ಬೆಂಬಲ ಬೆಲೆ ಕಾಯ್ದೆ ತರುವುದು ಮತ್ತು ವಿದ್ಯುತ್ ಖಾಸಗೀಕ ರಣ ಕಾಯ್ದೆ ಕೈಬಿಡುವ ಭರವಸೆ ನೀಡಿತ್ತು.ಆದರೆ ಇದುವರೆಗೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿಲ್ಲ. ಹಾಗಾಗಿ ಕೇಂದ್ರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಗೋವಿಂದರಾಜು ತಿಳಿಸಿದರು.
ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ಇಡೀ ದೇಶದಲ್ಲಿ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಕರ್ನಾಟಕದಲ್ಲಿ ಜಾರಿಗೆ ತಂದಿದರು.ಇದರ ವಿರುದ್ದ ಹೋರಾಟ ಆರಂಭವಾದಾಗ ಅಂದು ವಿರೋಧಪಕ್ಷದ ನಾಯಕರಾಗಿದ್ದ ಇಂದಿನ ಸಿ.ಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಅವರು,ಹೋರಾಟಗಾರರೊಂದಿಗೆ ಬೆಂಬಲ ಸೂಚಿಸಿ,ಸಭೆಗಳಲ್ಲಿ ಪಾಲ್ಗೊಂಡು,ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಭರವಸೆ ನೀಡಿದ್ದರು.ಆದರೆ ಸರಕಾರ ಬಂದು ಐದು ತಿಂಗಳು ಕಳೆದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.ಸರಕಾರ ಕೊಟ್ಟ ಮಾತಿಗೆ ತಪ್ಪಿದೆ.ಹಾಗಾಗಿ ರಾಜ್ಯ ಸರಕಾರದ ವಿರುದ್ದವೂ ಹೋರಾಟ ನಡೆಯಲಿದೆ ಎಂದರು.
ಸಂಯುಕ್ತ ಕಿಸಾನ್ ಮೋರ್ಚಾ,ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ
Leave a comment
Leave a comment