ತುಮಕೂರು:ಮಂಡ್ಯ ಜಿಲ್ಲೆ ಕೆರೆಗೋಡಿನ ಹನುಮಧ್ವಜ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಹಮ್ಮಿ ಕೊಂಡಿದ್ದ ಪ್ರತಿಭಟನೆಯ ವೇಳೆ ಕುರುಬರ ಹಾಸ್ಟಲ್ಗೆ ಕಲ್ಲು ತೂರಾಟ ನಡೆಸಿ,ಹಾಸ್ಟಲ್ ಕಟ್ಟಡದಲ್ಲಿ ತೂಗು ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭಕ್ತ ಕನಕದಾಸರ ಭಾವಚಿತ್ರಗಳನ್ನು ಒಳಗೊಂಡ ಪ್ಲಕ್ಸ್ ಹರಿದು ಹಾಕಿ ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಬಂಧಿಸಿ,ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಕುರುಬರ ಸಂಘ, ಕನಕ ಯುವಸೇನೆ, ಕರ್ನಾಟಕ ಪ್ರದೇಶ ಕುರುಬರ ಸಂಘ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕುರುಬ ಸಮುದಾಯದ ಮುಖಂಡರು, ಸರಕಾರ ಈ ಕೂಡಲೇ ಪ್ರತಿಭಟನೆಯ ವೇಳೆ ರೇಕಾರ್ಡ್ ಆಗಿರುವ ವಿಡಿಯೋ ಪೂಟೇಜ್ ಅನ್ನು ಆಧಾರವಾಗಿಟ್ಟು ಕೊಂಡು ಪ್ಲಕ್ಸ್ ಹರಿದು ಹಾಕಿದ ಹಾಗೂ ಕುರುಬರ ಹಾಸ್ಟಲ್ಗೆ ಕಲ್ಲೂ ತೂರಾಟ ಮಾಡಿ ಅದರ ಕಿಟಿಕಿ ಬಾಗಿಲುಗಳ ಗಾಜುಗಳನ್ನು ಒಡೆದು ಹಾಕಿದ ವ್ಯಕ್ತಿಗಳನ್ನು ಬಂಧಿಸಿ, ಕಠಿಣ ಶಿಕ್ಷಗೆ ಒಳಗಪಡಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್.ಟಿ.ಆರ್,ಹನುಮಧ್ವಜಕ್ಕೂ ಕುರುಬರಿಗೂ ಸಂಬAಧವಿಲ್ಲ.ಹಾಗಿದ್ದರೂ ಪ್ರತಿಭಟನೆಯ ವೇಳೆ ಕುರುಬರ ಹಾಸ್ಟಲ್ನ್ನು ಕೇಂದ್ರೀಕರಿಸಿ ಧಾಳಿ ನಡೆದಿರುವುದು ಖಂಡನೀಯ.ಕುರಿ ಕಾಯುವ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಎರಡು ಬಾರಿ ಮುಖ್ಯಮಂತ್ರಿಯಾಗಿರುವುದು ಇತರೆ ಸಮುದಾಯಗಳಿಗೆ ಸಹಿಸಲು ಸಾಧ್ಯವಿಲ್ಲದಂತಾಗಿ,ಪ್ರತಿಭಟನೆಯ ನೆಪದಲ್ಲಿ ಕುರುಬರನ್ನು ಹೆದರಿಸುವ ತಂತ್ರಕ್ಕೆ ಕೈಹಾಕಿದ್ದಾರೆ. ಕುರುಬರು ಸಹ ರಾಜ್ಯದಲ್ಲಿ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು,ಇವರ ಈ ಧೋರಣೆ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು.
ಕನಕ ಯುವಸೇನೆಯ ಜಿಲ್ಲಾಧ್ಯಕ್ಷ ಕೆಂಪರಾಜು ಮಾತನಾಡಿ,ಮಂಡ್ಯದ ಕೆರಗೋಡಿನಲ್ಲಿ ನಡೆದಿರುವುದು ಅತ್ಯಂತ ಹೇಯವಾದ ಕೃತ್ಯ.ನೇರವಾಗಿ ಸಿದ್ದರಾಮಯ್ಯನವರನ್ನು ಎದುರಿಸಲಾಗದೆ ಕಿಡಿಗೇಡಿಗಳು ಸಮುದಾಯದ ಮಕ್ಕಳು ಕಲಿಯುತ್ತಿರುವ ಹಾಸ್ಟಲ್ ಮೇಲೆ ಕಲ್ಲು ತೂರಾಟ ನಡೆಸಿ,ಬೇದರಿಕೆ ಒಡ್ಡುವ ತಂತ್ರಗಾರಿಕೆ ನಡೆಸಿದ್ದಾರೆ. ಈ ತಂತ್ರಗಳಿಗೆ, ಕುತಂತ್ರಗಳಿಗೆ ನಾವು ಹೆದರುವುದಿಲ್ಲ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಲಿದ್ದಾರೆ. ಕಾನೂನಿನ ಹೋರಾಟಗಳಿಗೆ ನಮ್ಮ ಅಭ್ಯಂತರವಿಲ್ಲ. ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ಹಾಗೆಂದ ಮಾತ್ರಕ್ಕೆ, ಇನ್ನೊಂದು ಸಮುದಾಯದ ಆಸ್ತಿಪಾಸಿ ಹಾನಿ ಮಾಡಿ, ಗಾಸಿಗೊಳಿಸುವ ಪ್ರಯತ್ನ ಸಲ್ಲದು, ನಾವು ಕೂಡ ಸಂಘಟಿತರಾಗಿದ್ದಾರೆ.ನಿಮಗೆ ಪ್ರತ್ಯುತ್ತರ ನೀಡುವಷ್ಟು ಶಕ್ತಿ ಎಂಬುದನ್ನು ನೀವುಗಳು ಅರ್ಥ ಮಾಡಿಕೊಳ್ಳಬೇಕು. ಇದು ಮುಂದುವರೆದರೆ ಅನಿವಾರ್ಯ ವಾಗಿ ನಾವು ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಕುರುಬರ ಸಂಘ, ಕನಕ ಯುವಸೇನೆ, ಕರ್ನಾಟಕ ಪ್ರದೇಶ ಕುರುಬರ ಸಂಘ ವತಿಯಿಂದ ಪ್ರತಿಭಟನೆ
Leave a comment
Leave a comment