ಅಕ್ಟೋಬರ್ 12 ದಿನಾಂಕದಂದು IG ಯವರು ಕಮಲಾಪುರಕ್ಕೆ ಹೋಗಿ ಬರುವಂತಹ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಕಾರ್ಯನಿರತ ಪೊಲೀಸ್ ಪೇದೆಯಾದ ರಾಜಶೇಖರ್ ಅವರಿಗೆ ಕುರುಕೋಟಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ರಮೇಶ್ ಸಾವು ಮತ್ತು ಅವರ ಮಗ ಕೂಡಿ ಹಲ್ಲೆ ಮಾಡಿರುವ ಹಿನ್ನೆಲೆಯಲ್ಲಿ ಬಹುಜನ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಸಮಿತಿ ಅಧ್ಯಕ್ಷರು ಕೂಡಲೇ ತಪ್ಪಿಸ್ತರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ತದನಂತರ ದಶರತ್ ಕಲಗುರ್ತಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರದ ಬಂದಾಗಿನಿಂದ ಹಲವು ಪ್ರಕರಣಗಳು ನಡೆಯುತ್ತಿವೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೇ . ಇಂಥ ಗಂಭೀರ ಸಮಸ್ಯೆಗಳನ್ನು ಬಗೆಹರಿಸಬೇಕು ತಪ್ಪಿಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಒಂದು ವೇಳೆ ತಪ್ಪಿಸ್ಥ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.