ತುಮಕೂರು:ಸಮರ್ಪಕ ವಿದ್ಯುತ್ ಪೂರೈಕೆ ಮಾಡದ,ಸಂಕಷ್ಟದ ನಡುವೆಯೂ ತೆಮಿಳುನಾಡಿಗೆ ಕಾವೇರಿ ನೀರು ಹರಿಸುತಿರುವ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಇಂದು ಬಿಜೆಪಿ ಜಿಲ್ಲಾ ರೈತಮೋರ್ಚಾ ವತಿಯಿಂದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನಾ ಮರವಣಿಗೆ ನಡೆಸಿ, ಅಧೀಕ್ಷಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಸ್ಕಾಂ ಕಚೇರಿ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್,ರೈತ ಇಂದು ಬರಗಾಲದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾನೆ.ಮಳೆಯಿಲ್ಲದೆ ಹಾಕಿದ್ದ ಬೆಳೆ ನಷ್ಟವಾಗಿದೆ.ಬೆಳೆ ಉಳಿಸಿಕೊಳ್ಳಲು ನೀರಾವರಿ ಪಂಪ್ಸೆಟ್ಗಳ ಮೊರೆ ಹೋಗಿದ್ದಾರೆ.ಇಂತಹ ಸಂದರ್ಭದಲ್ಲಿ ಸರಕಾರ ವಿದ್ಯುತ್ ಕಡಿತ ಮಾಡುವ ಮೂಲಕ ರೈತರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ.ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ರಾಜ್ಯದಲ್ಲಿ ಮಳೆಯಿಲ್ಲದೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ.ಹೀಗಿದ್ದರೂ ಸರಕಾರ ತೆಮಿಳುನಾಡಿಗೆ ಪ್ರತಿದಿನ ೫ ಸಾವಿರ ಕ್ಯೂಸೆಕ್ಸ್ನಂತೆ ನೀರು ಹರಿಸುತ್ತಿದೆ.ಅಲ್ಲದೆ ಸುಮಾರು ೧೩೫ ತಾಲೂಕುಗಳಲ್ಲಿ ಬರ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಅಧಿಕಾರಿಗಳಾಗಲಿ ಬರ ಅಧ್ಯಯನ ನಡೆಸಿಲ್ಲ. ಇದರ ಬಗ್ಗೆ ಸರಕಾರ ತೀವ್ರ ನಿರ್ಲಕ್ಷ ವಹಿಸಿದೆ.ಅಲ್ಲದೆ ಮೂರು ಬಾರಿ ವಿದ್ಯುತ್ ಬಿಲ್ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಇದು ಖಂಡನೀಯ.ಅಲ್ಲದೆ ರೈತರಿಗೆ ಕೇಂದ್ರ ಸರಕಾರ ನೀಡುತ್ತಿದ್ದ ಕೃಷಿ ಸನ್ಮಾನ ಯೋಜನೆಯನ್ನು ನಿಲ್ಲಿಸಿದೆ.ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳನ್ನು ಸ್ಥಗೀತಗೊಳಿಸಿ,ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶಿವಪ್ರಸಾದ್ ಆರೋಪಿಸಿದರು.
ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ,ಸರಕಾರ ಒಂದು ದಿನದ ವಿದ್ಯುತ್ ಖರೀದಿಗೆ ೪೦ ಕೋಟಿ ರೂ ಬೇಕು. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಭರದಲ್ಲಿ ವಿದ್ಯುತ್ ಉತ್ಪಾಧನೆಯನ್ನೇ ನಿಲ್ಲಿಸಿದೆ.ಇದರ ಪರಿಣಾಮ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತಿಲ್ಲ.ಕಾಂಗ್ರೆಸ್ ಸರಕಾರ ಬಂದ ನೂರು ದಿನಗಳಲ್ಲಿ ನೂರಾರು ತಪ್ಪುಗಳನ್ನು ಮಾಡಿ,ಜನತೆಯಿಂದ ಛೀಮಾರಿಗೆ ಒಳಗಾಗಿದೆ.ಇಂತಹ ಸರಕಾರ ಹೋಗಬೇಕು ಎಂಬುದು ಜನರ ಆಶಯವಾಗಿದೆ.ಶಕ್ತಿಯೋಜನೆ, ಗೃಹ ಲಕ್ಷಿö್ಮ,ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಯಡಿ ಶೇ೫೦ರಷ್ಟು ಪ್ರಗತಿಯಾಗಿಲ್ಲ.ಇವರ ಗ್ಯಾರಂಟಿ ನಂಬಿ ಮತ ನೀಡಿದ ಜನರು ಭ್ರಮನಿರಶನಕ್ಕೆ ಒಳಗಾಗಿದ್ದಾರೆ.ಇದು ಸಾಂಕೇತಿಕ ಹೋರಾಟವಾಗಿದೆ. ಮುಂದಿನ ಒಂದು ವಾರದೊಳಗೆ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಬಿಜೆಪಿ ಜಿಲ್ಲಾ ರೈತಮೋರ್ಚಾ ವತಿಯಿಂದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
Leave a comment
Leave a comment