ಕಲ್ಬುರ್ಗಿ ನಗರದಲ್ಲಿಂದು ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಉರುಳು ಸೇವೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಬಳಿ ರಸ್ತೆ ತಡೆದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್ ಹೂಗಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಇರುವಂತ ಈ ಸರ್ಕಾರ ಸಂಪೂರ್ಣ ಸತ್ತು ಹೋಗಿದೆ ತೋಟದ ಮನೆಯಲ್ಲಿ ವಾಸ ಮಾಡುವ ಕುಟುಂಬಗಳು ಲೈಟ್ ಇಲ್ಲದೆ ಕತ್ತಲಲ್ಲಿ ವಾಸಿಸುವಂತಾಗಿದೆ.
ಭೀಮಾ ನದಿಯಲ್ಲಿ ನೀರಿಲ್ಲ, ಕಬ್ಬುಗಳಿಗೆ ಸೂಕ್ತವಾದ ಬೆಲೆ ನಿಗದಿಯಾಗುತ್ತಿಲ್ಲ ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದೆ ಹೋದರೆ ರೈತರ ಶಾಪ ನಿಮಗೆ ತಟ್ಟುತ್ತದೆ ಎಂದು ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.
ತದನಂತರ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ರಾಜು ಬಡದಾಳ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರೈತರ ತೋಟದ ಮನೆಗೆ ಸಿಂಗಲ್ ಫೇಸ್ ವಿದ್ಯುತ್ ಒದಗಿಸಬೇಕು. ಮಳೆಬಾರದೇ ಬೆಳೆ ಒಣಗಿ ಹೋಗುತ್ತಿವೆ ಅದಕ್ಕೆ ಸರ್ಕಾರ ತಕ್ಷಣ ರೈತರ ಖಾತೆಗೆ ಪ್ರತಿ ಎಕರೆಗೆ 30 ಸಾವಿರ ಪರಿಹಾರ ನೀಡಬೇಕು. ಮಹಾರಾಷ್ಟ್ರ ಉಜ್ಜಯಿನಿ ಡ್ಯಾಮ್ ಇಂದ ಬೇಸಿಗೆ ಕಾಲದಲ್ಲಿ 5 ಟಿಎಂಸಿ ನೀರು ಭೀಮಾನದಿಗೆ ಹರಿಸಬೇಕು. ಹೆದ್ದಾರಿಯನ್ನು ತಕ್ಷಣ ದುರಸ್ತಿ ಮಾಡಬೇಕು. 20 ದಿನಗಳಲ್ಲಿ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕಬ್ಬು ಬೆಳೆಗಾರರ ಪದಾಧಿಕಾರಿಗಳು ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.