ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಬಾಲಭವನದಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ “ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯವೆಂದು ತಿಳಿಸಿದರಲ್ಲದೆ ಈ ಬಾರಿ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಂಗನವಾಡಿ ಮಕ್ಕಳಿಗೆ ಅವಕಾಶ ಕಲ್ಪಿಸಿರುವುದು ವಿಶೇಷ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ೩.೧೯ ಲಕ್ಷ ಶಾಲಾ ವಿದ್ಯಾರ್ಥಿಗಳು ಹಾಗೂ ೧.೩೦ಲಕ್ಷ ಅಂಗನವಾಡಿ ಮಕ್ಕಳಿದ್ದು, ಮಕ್ಕಳ ಅಪೌಷ್ಠಿಕತೆಯನ್ನು ದೂರ ಮಾಡಲು ಹಾಗೂ ಆರೋಗ್ಯವಂತ ಮಗುವಿಗೆ ಜನ್ಮ ನೀಡಲೆಂದು ಸುಮಾರು ೩೦೦೦ ಗರ್ಭಿಣಿ, ಬಾಣಂತಿಯರಿಗೆ ಕೆಎಂಎಫ್ ವತಿಯಿಂದ ಪೌಷ್ಠಿಕ ಆಹಾರ ಕಿಟ್ಗಳನ್ನು ವಿತರಿಸಲಾಗುತ್ತಿದೆ. ಪೌಷ್ಠಿಕ ಆಹಾರ ಸೇವನೆಯಿಂದ ಹುಟ್ಟುವ ಮಕ್ಕಳು ಆರೋಗ್ಯವಂತರಾಗಿರುತ್ತಾರೆ. ಆರೋಗ್ಯವಂತ ಮಕ್ಕಳಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ತಾಯಂದಿರು ಪೌಷ್ಠಿಕ ಆಹಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಅಂಗನವಾಡಿ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ವೇದಿಕೆ ಕಲ್ಪಿಸಿರುವುದು ಮಕ್ಕಳ ಮೇಲೆ ಜಿಲ್ಲಾಧಿಕಾರಿಗಳಿಗಿರುವ ಪ್ರೇಮವನ್ನು ತಿಳಿಯಬಹುದು ಎಂದು ಹೇಳಿದರು.
ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ಒನಕೆ ಓಬವ್ವ, ಭಗವಾನ್ ಶ್ರೀ ಕೃಷ್ಣ, ಕಿತ್ತೂರು ರಾಣಿ ಚೆನ್ನಮ್ಮ, ಚಾಚಾ ನೆಹರು, ನೇಗಿಲು ಹೊತ್ತ ರೈತ, ದೇಶ ಕಾಯುವ ವೀರ ಯೋಧ ಸೇರಿದಂತೆ ವಿವಿಧ ವೇಷಧಾರಿ ಮಕ್ಕಳನ್ನು ಕಣ್ತುಂಬಿಕೊAಡ ಅವರು, ಮಕ್ಕಳು ದೇಶಕ್ಕಾಗಿ ಶ್ರಮಿಸಿದ ಮಹನೀಯರು, ವೀರ ಮಹಿಳೆಯರ ವೇಷ ಧರಿಸುವುದಲ್ಲದೆ, ಅವರಲ್ಲಿರುವ ತತ್ವಾದರ್ಶಗಳನ್ನೂ ಸಹ ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪೋಷಕರು ತಮ್ಮ ಮಕ್ಕಳಿಗೆ ಮಾದರಿಯಾಗಿರಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಬೇಕು. ಮುಂದೊAದು ದಿನ ತಮ್ಮ ಮಕ್ಕಳು ಇತಿಹಾಸ ನಿರ್ಮಾಣ ಮಾಡುವಂತೆ ಬೆಳೆಸಬೇಕೆಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ಬಾಲ ಪ್ರತಿಭೆಗಳು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಮಕ್ಕಳನ್ನು ವಿವಿಧ ವೇಷಗಳಲ್ಲಿ ಅಣಿ ಮಾಡಿರುವ ಪೋಷಕರ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ ಮಾತನಾಡಿ, ಮಕ್ಕಳಿಗೆ ಶುಭಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ೯ ರಿಂದ ೧೬ ವರ್ಷದ ಮಕ್ಕಳಿಗಾಗಿ ಸೃಜನಶೀಲ ಕಲೆಗಳಾದ ಶಾಸ್ತಿçÃಯ ಸಂಗೀತ, ಜನಪದ ನೃತ್ಯ, ಕರ್ನಾಟಕ ಶಾಸ್ತಿçÃಯ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗುಮ ಸಂಗೀತ; ವಾದ್ಯ ಸಂಗೀತದಲ್ಲಿ ಮೃದಂಗ, ಕೀಬೋರ್ಡ್, ನಗಾರಿ, ಕೊಳಲು, ಡೊಳ್ಳು, ತಬಲಾ; ವಿಜ್ಞಾನದಲ್ಲಿ ಅವಿಷ್ಕಾರ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ವಿವಿಧ ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು, ತಾಯಂದಿರು ಸೇರಿದಂತೆ ಮತ್ತಿತರರು ಹಾಜರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ವಂದಿಸಿದರು.
ಕಾರ್ಯಕ್ರಮದಲ್ಲಿ ಸುಮಾರು ೨೦೦ ಮಕ್ಕಳು ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.