Tumkur, ಮೇ ೩೦- ರಾಷ್ಟ್ರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನಂತೆ ಜು.೮ ರಂದು ತುಮಕೂರು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಉಭಯ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಮತ್ತು ಶೀಘ್ರವಾಗಿ ಯಾವುದೆ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ತಿಳಿಸಿದರು.
ನಗರದ ನ್ಯಾಯಾಲಯ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವರ್ಷದ ೩೬೫ ದಿನ ಹಾಗೂ ದಿನದ ೨೪ ಗಂಟೆ ಜಿಲ್ಲಾ ಕಾನೂನು ನೆರವು ಪ್ರಾಧಿಕಾರದಿಂದ ಉಚಿತ ಕಾನೂನು ನೆರವನ್ನು ಪಡೆಯಲು ಅವಕಾಶ ಕಲ್ಪಿಸಿದ್ದು ಉತ್ತಮ ಸಮಾಜ ನಿರ್ಮಾಣಕ್ಕೆ ಲೋಕ ಅದಾಲತ್ ಸಹಕಾರಿಯಾಗಿದೆ ಎಂದರು.
ಲೋಕಅದಾಲತ್ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಕರ್ನಾಟಕ ರಾಜ್ಯ ಇಡಿ ದೇಶಕ್ಕೆ ಮೊದಲ ಸ್ಥಾನದಲ್ಲಿದ್ದು, ಇಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡ ಉಭಯಪಕ್ಷಗಾರರು ಗೆಲ್ಲುವುದಿಲ್ಲ, ಸೋಲುವುದು ಇಲ್ಲ ಹಾಗಾಗಿ ಇವರ ನಡುವಿನ ಸಂಬAಧ ಗಟ್ಟಿಯಾಗಿ ಸೌಹಾರ್ಧತೆ ಉಳಿಯುತ್ತದೆ ಎಂದರು.
ವ್ಯಾಜ್ಯಪೂರ್ವ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಸಣ್ಣಪುಟ್ಟ ಅಪರಾಧ ಪ್ರಕರಣಗಳನ್ನು ಲೋಕಅದಾಲತ್ನಲ್ಲಿ ರಾಜಿಮಾಡಿಕೊಳ್ಳಲು ಅವಕಾಶವಿದ್ದು, ಉಭಯಪಕ್ಷಗಾರರು ಇದರ ಪ್ರಯೋಜನಪಡೆದುಕೊಳ್ಳಬಹುದಾಗಿದೆ ಎಂದರು.
ಜನತಾ ನ್ಯಾಯಾಲಯದಲ್ಲಿ ತೀರ್ಮಾನವಾದ ಪ್ರಕರಣಗಳು ನ್ಯಾಯಾಲಯದ ಆದೇಶದಷ್ಟೆ ಮಹತ್ವವಾಗಿದ್ದು, ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದರು.
ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಹಾಜರಿದ್ದರು.
ತುಮಕೂರು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಬೃಹತ್ ಲೋಕ್ ಅದಾಲತ್
Leave a comment
Leave a comment