ತುಮಕೂರು, ಕರ್ನಾಟಕವಾರ್ತೆ, ಆಗಸ್ಟ್.೦೩: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ಸೆಪ್ಟಂಬರ್ ೧೧ ರಂದು ರಾಷ್ಟಿçÃಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು.
ಉಚ್ಚ ನ್ಯಾಯಾಲದ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಜಿ,ನರೇಂದರ್ ಇವರ ನಿರ್ದೇಶನಂತೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಜನತಾ ನ್ಯಾಯಾಲಯದ ಪ್ರಯುಕ್ತ ಇಂದು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಪ್ರಾಚೀನ ಭಾರತ ಸಂಸ್ಕೃತಿಯಲ್ಲಿ ಲೋಕ ಆದಾಲತ್ ಪರಿಕಲ್ಪನೆ ಮೂಲ ಹುಡುಕಬಹುದಾಗಿದ್ದು, ಅಂದು ದೇಶದ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿ ವ್ಯವಸ್ಥೆ ಮೂಲಕ ಯಾವುದೇ ಶುಲ್ಕವಿಲ್ಲದೆ ತ್ವರಿತವಾಗಿ ತೀರ್ಪುಗಳನ್ನು ನೀಡಲಾಗುತ್ತಿತ್ತು, ಈ ವ್ಯವಸ್ಥೆ ಇಂದು ಕಾನೂನು ರೂಪ ಪಡೆದಿದೆ ಎಂದರು.
ಸೆಪ್ಟಂಬರ್ ೧೧ ರಂದು ನಡೆಯುವ ಲೋಕ ಆದಾಲತ್ ಮೂಲಕ ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಇರುವಂತಹ ಕಾನೂನಿನ ಸಂಕಿರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಲು ಸಾಧ್ಯವಾಗುತ್ತದೆ, ಲೋಕ್ ಅದಾಲತ್ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ, ಸ್ವಪ್ರೇರಣೆಯಿಂದ ಮುಂದೆ ಬಂದು ತಮ್ಮ ವಿವಾದಗಳನ್ನು ಬಗೆಹರಿಸಿಕೊಂಡಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಬಹುದಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಭೇಟಿ ನೀಡಿ, ತಮ್ಮ ಸಿವಿಲ್ ಪ್ರಕರಣ ಇತ್ಯರ್ಥಪಡಿಸಕೊಳ್ಳಬಹುದು, ಪ್ರಕರಣ ಇತ್ಯರ್ಥವಾದÀಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊAದು ವಿಶೇಷ ಅವಕಾಶವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ ಮಾತನಾಡಿ ರಾಜ್ಯ ಸರ್ಕಾರ ಆದೇಶದ ರೀತ್ಯ ಪೊಲೀಸ್ ಇಲಾಖೆ ಇ-ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.೫೦ ರಿಯಾಯಿತಿ ನೀಡಲಾಗಿದ್ದು, ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಸೆಪ್ಟಂಬರ್ ೦೯ ರೊಳಗೆ ಸ್ವಯಂಪ್ರೇರಿತವಾಗಿ ಪಾವತಿಸಿದಲ್ಲಿ ಶೇ. ೫೦% ವಿನಾಯಿತಿ ನೀಡಲಾಗಿದ್ದು, ಇದರ ಸದೋಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು,
ಲೋಕ ಆದಾಲತ್ ಸಾಧನೆ: ಜುಲ್ಯೆ ೦೯ ರಂದು ಆಯೋಜಿಸಲಾಗಿದ್ದ ಲೋಕ ಅದಾಲತ್ನಲ್ಲಿ ಜೆಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ೯೨,೧೭೮ ಪ್ರಕರಣಗಳಲ್ಲಿ ೧೧,೭೯೦ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ೧,೫೯,೨೬೫ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೧,೭೧,೦೫೫.
ಮಹಿಳಾ ಸಮಾನತೆ: ೧೧ ಆಗಸ್ಟ್ ೨೦೨೦ ರಂದು ಮಾನ್ಯ ಸರ್ವೊಚ್ಚ ನ್ಯಾಯಾಲಯವು ವಿನಿತಾಶರ್ಮ ಪ್ರಕರಣದಲ್ಲಿ ಐತಿಹಾಸಿಕ ತೀರ್ಪನ್ನು ನೀಡಿದ್ದು ಹಿಂದೂ ಅವಿಭಕ್ತ ಕುಟುಂಬದಲ್ಲಿ ದಾಯಾದಿಯ ಮಗಳು, ಒಬ್ಬ ಮಗನ ರೀತಿಯಲ್ಲಿಯೇ ಹುಟ್ಟಿನಿಂದಲೇ ದಾಯಾದಿ ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಹೊಣೆಗಾರಿಕೆ ಹೊಂದುತ್ತಾಳೆAದು ಆದೇಶವಾಗಿರುತ್ತದೆ. ಅದ್ದರಿಂದ ನ್ಯಾಯಾಲಯಲ್ಲಿ ಬಾಕಿ ಇರುವ ವಿಭಾಗ ದಾವೆಗಳನ್ನು ಜನತಾ ನ್ಯಾಯಾಲಯದಲ್ಲಿ ಶೀಘ್ರದಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಅವಕಾಶ
ರಾಷ್ಟ್ರೀಯ ಲೋಕ ಅದಾಲತ್’
Leave a comment
Leave a comment