ಕಲ್ಬುರ್ಗಿ :- ಕಲಬುರ್ಗಿ ನಗರದಿಂದ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಮತ್ತು AIUTUC ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಸರ್ಕಾರಿ ಹಾಸ್ಟೆಲ್ /ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆಯವರು ,ಅಡುಗೆ ಸಹಾಯಕರು ಹಾಗೂ ಕಾವಲುಗಾರರ ವೇತನ ಹಾಗೂ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಎಂ ಜಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ 50 ವಿದ್ಯಾರ್ಥಿಗಳಿಗೆ ಇಬ್ಬರು ಅಡುಗೆಯವರು ಎಂಬ ಸರ್ಕಾರದ ಆದೇಶವನ್ನು ಹಿಂಪಡಿಯಬೇಕು ಹಳೆಯ ಆದೇಶದಂತೆ ಮೂವರನ್ನು ನೇಮಿಸಬೇಕು.
2023 – 24 ನೇ ಸಾಲಿನ ಪ್ರಸಕ್ತ ಕನಿಷ್ಠ ವೇತನ ಜಾರಿ ಮಾಡಬೇಕು.
ಕಾನೂನು ಬದ್ಧವಾಗಿ ನೀಡಬೇಕಾದ ವಾರದ ರಜೆ, ರಾಷ್ಟ್ರೀಯ ಹಬ್ಬಗಳ ರಜೆ, ಸಾಂದರ್ಭಿಕ ರಜೆಗಳನ್ನು ನೀಡಬೇಕು ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಶರಣು ಹೇರೂರು ಕಾರ್ಮಿಕರಾದ ಸಂತೋಷ್, ಶರಣಮ್ಮ, ವಿಜಯಲಕ್ಷ್ಮಿ ,ಮಾರುತಿ ಸೇರಿದಂತೆ ಮತೀತರು ಭಾಗವಹಿಸಿದರು.