ತುಮಕೂರು: ಸಂಸ್ಕೃತದಲ್ಲಿರುವ ಭಗವದ್ಗೀತೆಯು ಶ್ರೇಷ್ಠ ಕಾವ್ಯವೆಂದು ಜಗತ್ತು ಒಪ್ಪಿದೆ. ಸಂಸ್ಕೃತ ಭಾಷೆಯು ಎಲ್ಲ ಕಾಲಕ್ಕೂ ಹಿತವಾಗಿದ್ದೂ, ಜಗತ್ತಿನ ಶ್ರೇಷ್ಠವಾಹಿನಿಯಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಪ್ರೊ. ಟಿ. ಎನ್. ಪ್ರಭಾಕರ ತಿಳಿಸಿದರು.
ವಿಶ್ವವಿದ್ಯಾನಿಲಯ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಂಸ್ಕೃತ ವಿಭಾಗವು ಮಂಗಳವಾರ ಆಯೋಜಿಸಿದ್ದ ‘ಆಧುನಿಕ ಯುಗದಲ್ಲಿ ಸಂಸ್ಕೃತದ ಅವಶ್ಯಕತೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಕೃದಲ್ಲಿರುವ ಕಾಳಿದಾಸನ ಮಹಾಕಾವ್ಯಗಳು ವಿಲಿಯಂ ಶೇಕ್ಸ್ಪಿಯರ್ನ ಸಾನೆಟ್ಗಳಿಗಿಂತಲೂ, ಪ್ರಾಚೀನ ಗ್ರೀಕ್ ಮಹಾಕಾವ್ಯಗಳಾದ ಇಲಿಯಡ್, ಒಡಿಸ್ಸಿಗಿಂತಲೂ ಉನ್ನತ ಮಟ್ಟದ್ದಾಗಿದೆ ಎಂದು ವಿದೇಶಿ ಕವಿಗಳೇ ಒಪ್ಪಿದ್ದಾರೆ ಎಂದರು.
ವಿಚಾರ ವಿನಿಮಯ, ವಿಷಯಗಳ ಮಂಥನಕ್ಕೆ ಸ್ವಾಗತಿಸಿದ ದೇಶ ಭಾರತ. ಕ್ಷತ್ರಿಯನ ಕರ್ತವ್ಯವನ್ನು ನೆನಪು ಮಾಡಲು ಭಗವದ್ಗೀತೆ ಹೊರಟಿತು. ಪ್ರಶ್ನೆ ಉತ್ತರಗಳ ಜಿಜ್ಞಾಸೆ ಇರಬೇಕು. ವಿಷಯಗಳ ಮಂಥನ, ವಿಮರ್ಶೆಗಳಾಗಬೇಕು. ಎಲ್ಲ ಕಾಲಕ್ಕೂ ಅವಶ್ಯಕವಾದ ಕಲೆ, ಸಾಹಿತ್ಯ, ಸಂಗೀತದ ಉದಯವಾಗಿದ್ದು ಸಂಸ್ಕೃತ ಭಾಷೆಯಲ್ಲಿ. ಕನ್ನಡ ಹೃದಯದ ಭಾಷೆಯಾದರೆ, ಸಂಸ್ಕೃತ ಪುಣ್ಯಾಮೃತದ ಭಾಷೆ ಎಂದು ಹೇಳಿದರು.
ಸಂಸ್ಕೃತ ಭಾಷೆ ಜಗತ್ತಿನ ಶ್ರೇಷ್ಠವಾಹಿನಿ
Leave a comment
Leave a comment