ಯಾವುದೇ ಒಂದು ಸುದ್ದಿಯನ್ನು ಕೆಲವೇ ನಿಮಿಷಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಟಿವಿ ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದರು.
ಮಾದ್ಯಮ ಕ್ಷೇತ್ರ ಇಂದು ಬಹಳ ಸವಾಲುಗಳ ಮಧ್ಯೆ ನಿಂತಿದೆ. ಮಾಧ್ಯಮಕ್ಷೇತ್ರದಲ್ಲಿ ಇಂದು ಪತ್ರಕರ್ತರು ಸುದ್ದಿಯನ್ನು ಕೆಲವೇ ನಿಮಿಷಗಳಲ್ಲಿ ಕೊಡುತ್ತಿದ್ದಾರೆ. ಹಾಗೆ ಪತ್ರಕರ್ತರು ತಮ್ಮ ಜೀವನದಲ್ಲಿ ಬೆಳೆಯಬೇಕು ಎಂದರು.
ಚಿ.ನಿ.ಪುರುಷೋತ್ತಮ್ ಅವರು ಸತತ ಎರಡನೇ ಬಾರಿಗೂ ಅಧ್ಯಕ್ಷರಾಗಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದರ ಮೂಲಕ ತುಂಬಾ ಯಶಸ್ವಿಯಾಗಿ ಸಂಘವನ್ನು ಮುನ್ನಡೆಸುತ್ತಿದ್ದಾರೆ ಎಂದರು.
ನಾನು ರಾಜಕೀಯ ಕ್ಷೇತ್ರಕ್ಕೆ ಬಂದಿರುವುದು ಸಮಾಜ ಸೇವೆ ಮಾಡುವುದಕ್ಕೆ ಹಾಗೆ ಹೊರಟ್ಟಿ ಅವರು ಹುಬ್ಬಳ್ಳಿ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ೮ನೇ ಬಾರಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.
ಮಾನ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜು ಹೊರಟ್ಟಿ ಅವರಿಂದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು.
ತುಮಕೂರು ನಗರ ವ್ಯಾಪ್ತಿಯಲ್ಲಿ ಪತ್ರಕರ್ತರಿಗೆ ನಿವೇಶಗಳನ್ನು ನೀಡಲು ಜಾಗವನ್ನು ಗುರುತಿಸಲಾಗುವುದು ಹಾಗೂ ಪತ್ರಕರ್ತರು ಸ್ವಲ್ಪ ಮಟ್ಟಿಗೆ ಹಣವನ್ನು ಪಾವತಿ ಮಾಡಿ ನಿವೇಶನಗಳನ್ನು ಪಡೆಯಬೇಕು ಎಂದು ಹೇಳಿದರು.
ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ತುಮಕೂರು ಜಿಲ್ಲೆಯಲ್ಲಿ ಮಾಡಲು ಆತಿಥ್ಯವನ್ನು ಕೊಟ್ಟರೆ ದೊಡ್ಡಮಟ್ಟದಲ್ಲಿ ಕಾರ್ಯಕ್ರಮವನ್ನು ಮಾಡುತ್ತೇವೆ ಎಂದು ಹೇಳಿದರು.
ಇತ್ತೀಚೆಗೆ ಇಸ್ರೇಲ್ ಯುದ್ಧಭೂಮಿಗೆ ಪತ್ರಕರ್ತರು ತೆರಳಿ ಅಲ್ಲಿನ ವಾಸ್ತವ ಸಂಗತಿಯನ್ನು ಜನರಿಗೆ ತೋರಿಸುವ ಕೆಲಸ ಮಾಡುತ್ತಿದ್ದಾರೆ. ಯುದ್ಧಭೂಮಿಯಲ್ಲಿ ಬಾಂಬ್ ದಾಳಿಗಳು ನಿರಂತರವಾಗಿ ನಡೆಯುತ್ತಿದ್ದರೂ, ಅದಕ್ಕೆಲ್ಲ ಜಗ್ಗದೆ, ತಮ್ಮ ಜೀವನವನ್ನು ಪಣಕ್ಕಿಟ್ಟು ವರದಿ ಮಾಡುವುದು ಒಂದು ದೊಡ್ಡ ಸಾಧನೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಮಾತನಾಡಿ, ಪತ್ರಿಕಾ ಬಳಗದವರು ಯಾವುದೇ ಭೇದ ಭಾವ ಮಾಡದೆ ನೀಡುವ ಪ್ರಶಸ್ತಿ ತುಂಬಾ ಶ್ರೇಷ್ಠವಾದದ್ದು. ಸಮಾಜದ ಅಂಕುಡೊAಕುಗಳನ್ನು ಸರಿಪಡಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ದೇಶದಲ್ಲಿ ಪತ್ರಿಕಾ ರಂಗವು ನಾಲ್ಕನೇ ಅಂಗವಾಗಿ ಗುರುತಿಸಿಕೊಂಡಿದೆ. ಪತ್ರಿಕಾ ರಂಗದಲ್ಲಿ ಸೇವೆ ಮಾಡುವುದು ಉತ್ತಮ ಸೇವೆಯಾಗಿದೆ. ಪರಮೇಶ್ವರ್ ಅವರು ಸರಳ ಸಜ್ಜನ ರಾಜಕಾರಣಿ , ಪತ್ರಕರ್ತರ ಸಂಘಕ್ಕೆ ದತ್ತಿ ನಿಧಿಯನ್ನು ನಾನು ನೀಡುತ್ತೇನೆ, ಆದರೆ ಅದನ್ನು ನನ್ನ ತಾಯಿಯ ಸವಿ ನೆನಪಿಗಾಗಿ ಅದನ್ನು ಮಹಿಳಾ ಪತ್ರಕರ್ತರಿಗೆ ನೀಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪರಮೇಶ್ವರ್ ಅವರು ತುಮಕೂರು ಜಿಲ್ಲೆಯ ಸಜ್ಜನ ರಾಜಕಾರಣಿ, ಶಿಕ್ಷಣ, ಆರೋಗ್ಯ, ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯನ್ನು ಅವರ ತಂದೆ ಪ್ರಾರಂಭಿಸಿದ್ದರು. ಅದನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.
ನಮ್ಮ ಜಿಲ್ಲೆಯ ಪರಮೇಶ್ವರ್ ಅವರಿಗೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಸ್ಥಾನ ಲಭಿಸಲಿ ಎಂದು ಆಶಿಸಿದರು. ಪತ್ರಕರ್ತರಿಗಾಗಿ ದತ್ತಿ ಹಣವನ್ನು ನೀಡಬೇಕೆಂದು ಹೊರಟ್ಟಿ ಅವರಲ್ಲಿ ವಿನಂತಿ ಮಾಡಿದರು.
ಜ್ಯೋತಿ ಗಣೇಶ್ ಅವರು ಮಾತನಾಡಿ , ಕೊರೋನ ಸಮಯದಲ್ಲಿ ಸಂಕಷ್ಟ ಎದುರಾದಾಗ ಪತ್ರಕರ್ತರ ಜೊತೆ ನಿಂತು ಕೆಲಸ ಮಾಡಿದ್ದನ್ನು ಸ್ಮರಿಸಿದರು.
೨೦೨೪ರಲ್ಲಿ ರಾಜ್ಯ ಸಮ್ಮೇಳನವನ್ನು ತುಮಕೂರು ಜಿಲ್ಲೆಯಲ್ಲಿ ಮಾಡುವುದಕ್ಕಾಗಿ ಅವಕಾಶ ಕಲ್ಪಿಸಿಕೊಡಬೇಕು ಎಂದು ಈಗಾಲೇ ಮನವಿ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ, ಹುಲಿನಾಯ್ಕರ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಪ್ರಜಾ ಪ್ರಗತಿ ಉಪ ಸಂಪಾದಕ ಮಧುಸೂಧನ್ ಉಪಸ್ಥಿತರಿದ್ದರು.