ಜಿಲ್ಲಾಧಿಕಾರಿಗಳಿಂದ ಸೆಲ್ಫೀ ಫೋಟೋ ಅಭಿಯಾನ ಚಾಲನೆ
ತುಮಕೂರು(ಕ.ವಾ.)ಏ.೧೧: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಮತದಾನದ ಮಹತ್ವದ ಬಗ್ಗೆ ಮತದಾರರಿಗೆ ಜಾಗೃತಿಯನ್ನುಂಟು ಮಾಡಲು ಜಿಲ್ಲೆಯ ಸ್ವೀಪ್ ತಂಡವು ನಗರದ ಎಂಪ್ರೆಸ್ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿಂದು ಹಮ್ಮಿಕೊಂಡಿದ್ದ “ಸೆಲ್ಫೀ ಫೋಟೋ ಅಭಿಯಾನ ಹಾಗೂ ಮತದಾರರ ಸಹಿ ಅಭಿಯಾನ”ಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದಿಂದ ಯಾರೂ ತಪ್ಪಿಸಿಕೊಳ್ಳಬಾರದು. ಸುಭದ್ರ ಪ್ರಜಾಪ್ರಭುತ್ವಕ್ಕೆ ಮತದಾನ ಅತ್ಯಾವಶ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ೧೩೨-ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್, ಸಹಾಯಕ ಚುನಾವಣಾಧಿಕಾರಿ ಹಾಗೂ ಉಪ ಆಯುಕ್ತೆ ಸುಮತಿ, ನಗರ SಗಿಇಇP ನೋಡಲ್ ಅಧಿಕಾರಿ ಹಾಗೂ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಜಿಲ್ಲಾಧಿಕಾರಿಗಳಿಂದ ಸೆಲ್ಫೀ ಫೋಟೋ ಅಭಿಯಾನ ಚಾಲನೆ
Leave a comment
Leave a comment