ತುಮಕೂರು:ಕಳೆದ 17 ವರ್ಷಗಳಿಂದ ಅಂಗವಿಕಲರ ಅಭಿವೃದ್ದಿಗಾಗಿ ಸೇವೆ ಸಲ್ಲಿಸುತ್ತಿರುವ ವಿ.ಆರ್.ಡಬ್ಲö್ಯ, ಎಂ.ಆರ್.ಡಬ್ಲö್ಯ ಗಳ ಸೇವೆಯನ್ನು ಖಾಯಂ ಗೊಳಿಸಬೇಕು ಹಾಗೂ ವಿಕಲಚೇತನರು ಹಾಗೂ ಹಿರಿಯನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ, ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ವಿಕಲಚೇತನ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ, ನಗರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.